Advertisement

Gandhi Jayanthi: ನಾಳೆ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ

01:36 AM Oct 01, 2024 | Team Udayavani |

ಬೆಂಗಳೂರು: ಮಹಾತ್ಮ ಗಾಂಧೀಜಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಮಹಾಧಿವೇಶನದ ಅಧ್ಯಕ್ಷತೆ ಜತೆಗೆ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು ನೂರು ವರ್ಷಗಳಾಗಿವೆ. ಈ ಸ್ಮರಣಾರ್ಥ ಅಕ್ಟೋಬರ್‌ 2ರಂದು ಕೆಪಿಸಿಸಿ ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವತ್ಛತ ಪ್ರತಿಜ್ಞಾವಿಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

Advertisement

ಅಂದು ಬೆಳಗ್ಗೆ 11 ಗಂಟೆಗೆ ಗಾಂಧಿ ನಡಿಗೆಯ ಭಾಗವಾಗಿ ನಗರದ ಎಂ.ಜಿ. ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವಿನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದವರೆಗೆ ಗಾಂಧಿ ಜ್ಯೋತಿ ಪಾದಯಾತ್ರೆ ನಡೆಯಲಿದೆ. ಇದೇ ರೀತಿ, ಎಲ್ಲ ಜಿಲ್ಲಾ, ತಾಲೂಕು, ಬ್ಲಾಕ್‌ ಮಟ್ಟದಲ್ಲಿ ನಡೆಯಲಿದೆ. ಇದರಲ್ಲಿ ಬೆಂಗಳೂರಿನ ಶಾಸಕರು ಸೇರಿದಂತೆ ಆಯಾ ಭಾಗಗಳಲ್ಲಿ ಪಕ್ಷದ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬೆಂಗಳೂರು ಒಳಗೊಂಡಂತೆ ಎಲ್ಲ ಜಿಲ್ಲಾ, ತಾಲೂಕು ಮತ್ತು ಬ್ಲಾಕ್‌ ಮಟ್ಟದಲ್ಲಿ ಸ್ವತ್ಛತೆ ಮತ್ತು ಗಾಂಧೀಜಿ ವಿಚಾರಗಳ ಬಗ್ಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಝೂಮ್‌ ಮೂಲಕ ಏಕಕಾಲದಲ್ಲಿ ನಡೆಯಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next