Advertisement

ಗಾಂಧಿ ಅಹಿಂಸಾ ಹೋರಾಟ ಇಂದಿಗೂ ಪ್ರಸ್ತುತ

01:52 PM Oct 03, 2021 | Team Udayavani |

ದೊಡ್ಡಬಳ್ಳಾಪುರ: ಇಂದು ದೇಶದಲ್ಲಿ ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ದೇಶ ಪ್ರಗತಿ ಹೊಂದುತ್ತಿದೆ ಎಂದರೆ ಅದು ಗಾಂಧೀಜಿಯವರಂತಹ ಮಹಾಮ ಹಿಮರ ಕೊಡುಗೆಯಾಗಿದೆ ಎಂದು ಶಾಸಕ ಟಿ. ವೆಂಕಟರಮಣಯ್ಯ ಹೇಳಿದರು.

Advertisement

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಯಿಂದ ನಗರದ ತಾಲೂಕು ಕಚೇರಿಯಲ್ಲಿ ನಡೆದ ಮಹಾತ್ಮ  ಗಾಂಧಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರಕ್ತ ಕ್ರಾಂತಿಯ ಮೂಲಕ ಸ್ವಾತಂತ್ರÂ ಪಡೆಯುತ್ತಿ  ರುವ ಸಂದರ್ಭದಲ್ಲಿ ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರÂ ತಂದುಕೊಟ್ಟ ಗಾಂಧೀಜಿ  ಯವರ ಮಾದರಿ ಇಡೀ ವಿಶ್ವದಲ್ಲಿಯೇ ಹೆಸರಾಗಿದೆ.

ಇದನ್ನೂ ಓದಿ;- ವಿದ್ಯುತ್ ಶಾಕ್ : ಅಜ್ಜಿ, ಮೊಮ್ಮಗ ಬಲಿ; ಸೊಸೆ ಗಂಭೀರ

ಸ್ವಾತಂತ್ರ್ಯ ಪೂರ್ವದಲ್ಲಿ ಸಾಕ್ಷರತೆ ಪ್ರಮಾಣ ತೀರಾ ಕಡಿಮೆಯಿತ್ತು. ಆದರೆ ದೇಶದಲ್ಲಿ ಈಗ ಸಾಕ್ಷರತೆ ಪ್ರಮಾಣ ಹೆಚ್ಚಾಗುತ್ತಿದೆ. ದೇಶದಲ್ಲಿದ್ದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ಸ್ವಾತಂತ್ರÂದ ಅರ್ಥ ಮೂಡಿಸಿದ ಗಾಂಧಿ ಸದಾ ಸ್ಮರಣೀಯರು ಎಂದರು.

ಉಪವಿಭಾಗಾಧಿಕಾರಿ ಅರುಳ್‌ ಕುಮಾರ್‌ ಮಾತನಾಡಿ, ಜಾಗತೀಕರಣದ ಇಂದಿನ ದಿನಗಳಲ್ಲಿ ದೇಶಗಳು ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಗಾಂಧೀಜಿಯರ ಅಹಿಂಸಾತ್ಮಕ ಹೋರಾಟ ಮತ್ತೆ ಪ್ರಸ್ತುತವಾಗುತ್ತಿದೆ. ಗ್ರಾಮಗಳ ಸಬಲೀಕರಣದಿಂದ ದೇಶದ ಪ್ರಗತಿ ಸಾಧ್ಯ ಎಂದು ಗಾಂಧೀಜಿ ಮನಗಂಡಿದ್ದರು. ಅವರ ಜನ್ಮ ದಿನಾಚರಣೆ ಅಂಗವಾಗಿ ಒಂದು ತಿಂಗಳ ಕಾಲ ಸ್ವತ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೇಶದ ಎರಡನೇ ಪ್ರಧಾನಿಯಾಗಿದ್ದ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಪ್ರಾಮಾಣಿಕವಾಗಿ ದೇಶದ ಆಡಳಿತ ನಡೆಸಿದರು ಎಂದು ಹೇಳಿದರು.

Advertisement

ಕಾನೂನು ಅರಿವು: ವಕೀಲರಾದ ಕನಕರಾಜು ಮಾತನಾಡಿ, ಲೋಕ ಅದಾಲತ್‌ನಲ್ಲಿ ರಾಜಿ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕೊಳ್ಳಬಹುದಾಗಿದ್ದು, ಕಾನೂನು ಸೇವಾ ಸಮಿತಿ ಇದರ ನೇತೃತ್ವ ವಹಿಸಿದೆ ಎಂದರು. ತಹಸೀಲ್ದಾರ್‌ ಟಿ.ಎಸ್‌.ಶಿವರಾಜ್‌, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಉಪ ನಿರ್ದೇಶಕ ಸೋಮಶೇಖರ್‌, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್‌, ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ಬೈರೇಗೌಡ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ನಗರಸಭೆ ಸದಸ್ಯರು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next