Advertisement

ಆದರ್ಶ ನಾಯಕರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಪ್ರಭಾಕರ ರಾವ್

05:34 PM Oct 02, 2021 | Suhan S |

ಸೊರಬ: ಬದುಕಿನಲ್ಲಿ ಎದುರಾಗುವ ಕಷ್ಟಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ ವ್ಯಕ್ತಿ ಸಮಾಜದಲ್ಲಿ ಉನ್ನತ ನಾಯಕರಾಗಿ ಹೊರಹೊಮ್ಮುತ್ತಾರೆ. ಅಂತಹವರಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕ ಮಹಾತ್ಮ ಗಾಂಧಿ ಅವರನ್ನು ಪ್ರಸ್ತುತ ಜಗತ್ತೇ ಗೌರವಿಸುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಭಾಕರ ರಾವ್ ಹೇಳಿದರು.

Advertisement

ಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯ ಆವರಣದಲ್ಲಿ ಶನಿವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ವಿಫಲರಾದರೆ ಆತ್ಮಹತ್ಯೆಯ ಹಾದಿಯನ್ನು ಹಿಡಿಯಬಾರದು. ಸೋಲನ್ನು ಆತ್ಮವಿಶ್ವಾಸದಿಂದ ಸವಾಲಾಗಿ ಸ್ವೀಕರಿಸಬೇಕು. ದೇಶಕ್ಕಾಗಿ ಹೋರಾಡಿದ ಮಹಾನ್ ನಾಯಕರು ಅನೇಕ ಕಷ್ಟಗಳನ್ನು ಅನುಭವಿಸಿದ್ದಾರೆ. ಅಂತಹವರು ಇಂದು ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ. ಬಾಲ್ಯದಿಂದಲೂ ಎದುರಾದ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನ ರಚಿಸಿದ ಮಹಾನ್ ಚೇತನರಾದರು. ಅಂತೆಯೇ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಸೇರಿದಂತೆ ಅನೇಕ ನಾಯಕರ ಆದರ್ಶಗಳು ಮತ್ತು ತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ದಿವಾಳಿ ಅಂಚಿಗೆ ಬಂದು ನಿಂತಿದೆ ಕಾಂಗ್ರೆಸ್‌; ಅಶ್ವತ್ಥ ನಾರಾಯಣ ವ್ಯಂಗ್ಯ

ಮಹಿಳೆಯರಿಗೆ ಗೌರವ ನೀಡುವ ಮನಸ್ಥಿತಿಯನ್ನು ಬೆಳೆಸಿಕೊಂಡರೆ ವ್ಯಕ್ತಿತ್ವದಲ್ಲಿಯೂ ಬದಲಾವಣೆ ಸಾಧ್ಯವಿದೆ. ಸಂವಿಧಾನವು ಪ್ರತಿಯೊಬ್ಬ ಭಾರತೀಯರಿಗೂ ಹಕ್ಕುಗಳನ್ನು ನೀಡಿದ್ದು, ಕರ್ತವ್ಯಗಳನ್ನು ಪಾಲಿಸುವುದು ಸಹ ಅಷ್ಟೇ ಮುಖ್ಯ. ವಿದ್ಯಾರ್ಥಿಗಳು ಪದವಿ ಪಡೆಯುವುದು ಮಾತ್ರ ಶಿಕ್ಷಣವಲ್ಲ. ಜೊತೆಯಲ್ಲಿ ಸುತ್ತಲಿನ ಸಮಾಜದಲ್ಲಿ ಬದಲಾವಣೆ ತರುವ ಕೆಲಸವಾದಗ ಶಿಕ್ಷಣಕ್ಕೆ ಮಹತ್ವ ಬರುತ್ತದೆ ಎಂದ ಅವರು, ಕಾನೂನು ಸೇವಾ ಸಮಿತಿಯಿಂದ ಸಮಾಜದಲ್ಲಿನ ಆಶಕ್ತರು, ದುರ್ಬಲರು, ಮಹಿಳೆಯರಿಗೆ ಉಚಿತವಾಗಿ ಕಾನೂನು ಸಲಹೆ ಪಡೆಯಲು ಅವಕಾಶವಿದ್ದು, ಇದ ಪ್ರಯೋಜನ ಪಡೆಯಬೇಕು. ಪ್ರತಿಯೊಬ್ಬರಿಗೂ ನ್ಯಾಯ ದೊರೆಯಬೇಕು ಎಂಬುದು ಸೇವಾ ಸಮಿತಿಯ ಉದ್ದೇಶವಾಗಿದೆ ಎಂದರು.

Advertisement

ಇದೇ ಸಂದರ್ಭದಲ್ಲಿ ಮೂಲ ಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ವಾಚನ ಮಾಡಿಸಲಾಯಿತು.

ಸಿವಿಲ್ ನ್ಯಾಯಾಧೀಶರಾದ ಬಿ. ಕೇಶವಮೂರ್ತಿ, ಅಪರ ಸಿವಿಲ್ ನ್ಯಾಯಾಧೀಶರಾದ ಎಂ. ಮಂಜು, ವಕೀಲರ ಸಂಘದ ಅಧ್ಯಕ್ಷ ಮಹೇಂದ್ರ ವಿ. ದೇಸಾಯಿ, ತಹಶೀಲ್ದಾರ್ ಶಿವಾನಂದ ಪಿ. ರಾಣೆ, ತಾಪಂ ಇಒ ಕೆ.ಜಿ. ಕುಮಾರ್, ಬಿಸಿಎಂ ಇಲಾಖೆಯ ಸದಾಶಿವ, ಬಿಇಒ ಎಸ್.ಸಿ. ನಂಜರಾಜ, ಪುರಸಭೆ ಮುಖ್ಯಾಧಿಕಾರಿ ಬಿ. ಮಹೇಂದ್ರ, ಹಿರಿಯ ವಕೀಲ ಎಂ. ನಾಗಪ್ಪ, ದೈಹಿಕ ಶಿಕ್ಷಣ ಪರೀವೀಕ್ಷಕ ಲಿಂಗರಾಜ ಒಡೆಯರ್ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next