Advertisement

“ಅಹಿಂಸಾವಾದಿ ಮಹಾತ್ಮ ವಿಶ್ವಕ್ಕೇ ಪಿತಾಮಹ’

12:28 AM Oct 05, 2019 | Sriram |

ಮಡಿಕೇರಿ:ಶಾಂತಿ, ಸತ್ಯ, ಅಹಿಂಸಾ ಮಾರ್ಗದ ಮೂಲಕ ಜಗತ್ತನ್ನು ಗೆಲ್ಲಬಹುದು ಎಂಬ ಸಂದೇಶ ಸಾರಿದ ಮಹಾತ್ಮ ಗಾಂಧೀಜಿ ಅವರು ಇಡೀ ವಿಶ್ವಕ್ಕೆ ಪಿತಾಮಹ ಎಂದು ಶಾಸಕ‌ ಎಂ.ಪಿ.ಅಪ್ಪಚ್ಚುರಂಜನ್‌ ಅವರು ಬಣ್ಣಿಸಿದ್ದಾರೆ.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬುಧವಾರ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150 ನೇ ಜನ್ಮ ವರ್ಷಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್‌ ಬಹುದ್ದೂರ್‌ ಶಾಸಿŒ ಅವರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ವೋದಯ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್‌ ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಅವರು ಮಹಾನ್‌ ಮಾನವತಾವಾದಿ, ಸಮಾಜವಾದಿಯಾಗಿ ಶಾಂತಿ, ಅಹಿಂಸೆ ಮೂಲಕ ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು ಲಾಲ್‌ ಬಹುದ್ದೂರ್‌ ಶಾಸಿŒ ಅವರು ಅಪ್ಪಟ್ಟ ಗಾಂಧಿವಾದಿಯಾಗಿ ಗಾಂಧಿ ತತ್ವದಂತೆ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸಿದರು ಎಂದು ಅವರು ಸ್ಮರಿಸಿದರು.

ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಮಾತನಾಡಿ ಗಾಂಧೀಜಿಯವರ ತತ್ವಗಳು, ಸಿದ್ಧಾಂತಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಲೋಕೇಶ್‌ ಸಾಗರ್‌ ಅವರು ಮಾತನಾಡಿ ಗಾಂಧೀಜಿಯವರ ಸರಳತೆ, ಅಹಿಂಸೆ, ಸತ್ಯ, ಶಾಂತಿ, ಪ್ರೀತಿ ಸಮತೆಗಳ ಸಕಾರ ಮಾದರಿ ಎಂದು ನುಡಿದರು.

Advertisement

ಪಾಪು-ಬಾಪು ಪುಸ್ತಕ ಬಿಡುಗಡೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರ ತರಲಾಗಿದ್ದ ಪಾಪು-ಬಾಪು ಕಿರು ಪುಸ್ತಕವನ್ನು ಇದೇ ಸಂದರ್ಭ ಅನಾವರಣಗೊಳಿಸಲಾಯಿತು. ಮಹಾತ್ಮ ಗಾಂಧೀಜಿ 150 ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಿತು. ಗಾಂಧೀಜಿ ಕುರಿತ ಅಪರೂಪದ ಛಾಯಾಚಿತ್ರ ಪ್ರದರ್ಶನ ಜರುಗಿತು. ವಿವಿಧ ‌ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಸಸಿ ವಿತರಣೆ :
ಆಯುಷ್ಮಾನ್‌ ಆರೋಗ್ಯ ಕಾರ್ಡ್‌ ಮತ್ತು ಸಸಿ ವಿತರಣೆ ಮಾಡಲಾಯಿತು. ಮಹಾತ್ಮ ಗಾಂಧೀಜಿ ಕುರಿತು ಗೀತಾಗಾಯನ ನಡೆಯಿತು. ಜಿ.ಪಂ.ಸಿಇಒ ಕೆ.ಲಕ್ಷಿ¾àಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಭೂ ದಾಖಲೆಗಳ ಉಪ ನಿರ್ದೇಶಕ ಶ್ರೀನಿವಾಸ್‌, ಪೌರಾಯುಕ್ತ ಎಂ.ಎಲ್‌.ರಮೇಶ್‌, ತಹಶೀಲ್ದಾರ್‌ ಮಹೇಶ್‌, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ‌ ಕೆಂಚಪ್ಪ, ಉಪಸ್ಥಿತರಿದ್ದರು. ಚಿನ್ನಸ್ವಾಮಿ ಸ್ವಾಗತಿಸಿದರು, ಲಿಯಾಕತ್‌ ಅಲಿ ವೈಷ್ಣವ ಗೀತೆ ಹಾಡಿದರು.

ಮುನೀರ್‌ ಅಹ್ಮದ್‌ ನಿರೂಪಿಸಿದರು, ಲಹರಿ ಶಿಕ್ಷಕರ ತಂಡದವರು ನಾಡಗೀತೆ ಹಾಡಿದರು. ಮಂಜುನಾಥ್‌ ಅವರುವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next