Advertisement

ಗಾಂಧಿ ಜಯಂತಿ: ಪ್ರಧಾನಿ,ರಾಷ್ಟ್ರಪತಿಯಿಂದ ರಾಷ್ಟ್ರಪಿತನಿಗೆ ಗೌರವ ನಮನ 

09:35 AM Oct 02, 2018 | |

ಹೊಸದಿಲ್ಲಿ: ದೇಶಾದ್ಯಂದ ರಾಷ್ಟ್ರಪಿತ ಮಹಾತ್ಮಾಗಾಂಧಿ ಅವರ 149 ನೇ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ದೇಶದ ಮೂಲೆಮೂಲೆಗಳನ್ನು ಸ್ವಚ್ಛತಾ ಕಾರ್ಯ ಸೇರಿದಂತೆ ಹಲವು ಅರ್ಥ ಪೂರ್ಣ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. 

Advertisement

ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ. 

ಪ್ರಧಾನಿ ಮೋದಿ ಅವರು ಇಂದು ನೈರ್ಮಲ್ಯ ಮತ್ತು ನವೀಕರಿಸಬಹುದಾದ ಶಕ್ತಿಯ ಕುರಿತಾಗಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. 

ಸಾರ್ವಜನಿಕರು ಕೂಡ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದು ,ದೇಶದ ಮೂಲೆ ಮೂಲೆಗಳಲ್ಲಿ  ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು ಸ್ವಚ್ಛತಾ ಕಾರ್ಯದಲ್ಲಿ ನಿರತವಾಗಿವೆ. 

ಲಾಲ್‌ ಬಹದ್ದೂರ್‌ ಶಾಸ್ತ್ರಿ ಸ್ಮರಣೆ 
ಭಾರತದ 2 ನೇ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮ ದಿನಚವನ್ನೂ ಇಂದು ಆಚರಿಸಲಾಗುತ್ತಿದ್ದು, ದೇಶಾದ್ಯಂತ ಅವರ ಸ್ಮರಣೆ ನಡೆಸಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next