Advertisement

ಗಾಂಧಿ ಜಯಂತಿ; ಪೊರಕೆ ಹಿಡಿದು ಕಸ ಗುಡಿಸಿದ ಕಲಬುರಗಿ ಜಿ.ಪಂ. ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ

10:44 AM Oct 02, 2022 | Team Udayavani |

ಕಲಬುರಗಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮ ದಿನದ ಅಂಗವಾಗಿ ರವಿವಾರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ ಅವರು ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

Advertisement

ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಜಗದೇವಪ್ಪ, ಮುಖ್ಯ ಲೆಕ್ಕಾಧಿಕಾರಿ ಕು.ಗಾಯತ್ರಿ, ಸಹಾಯಕ ಕಾರ್ಯದರ್ಶಿ ಪ್ರಭಾಕರ ಗೊಬ್ಬೂರ, ಲೆಕ್ಕಾಧಿಕಾರಿ ಪವನ್, ವ್ಯವಸ್ಥಾಪಕ ಮಲ್ಲಿಕಾರ್ಜುನ, ಎಸ್.ಬಿ.ಎಂ ಜಿಲ್ಲಾ ಸಂಯೋಜಕಿ ಗುರುಬಾಯಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಟೌನ್ ಹಾಲ್ ಮುಂಭಾಗ ನಗರದ ಟೌನ್ ಹಾಲ್ ಮುಂಭಾಗದಲ್ಲಿ ಪಾಲಿಕೆಯ ಆಯುಕ್ತರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಿನವಿಡೀ ನಗರದ ಹಲವು ಕಡೆಗಳಲ್ಲಿ ಪಾಲಿಕೆಯಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೂಡ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು. ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಜಿಲ್ಲಾ ಕಚೇರಿಯ ಉಸ್ತುವಾರಿ ತಹಶೀಲ್ದಾರ್ ಅವರು ಬಾಪು ಭಾವಚಿತ್ರಕ್ಕೆ ಪೂಜೆ ಮಾಡುವ ಮೂಲಕ ಆಚರಣೆ ನೆರವೇರಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next