Advertisement

“ಗಾಂಧೀಜಿ ಆದರ್ಶ ಸಾರ್ವಕಾಲಿಕ ಮೌಲ್ಯ ಹೊಂದಿವೆ’

10:54 PM Sep 27, 2019 | Sriram |

ಹೆಬ್ರಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಚಿಂತನೆ, ಆದರ್ಶಗಳು ಸಾರ್ವಕಾಲಿಕ ಮೌಲ್ಯ ಹೊಂದಿದ್ದು ಇಂದಿನ ಯುವಜನತೆ ಗಾಂಧೀಜಿಯ ಜೀವನ ಮತ್ತು ಆದರ್ಶಗಳನ್ನು ಅರಿತು ಅಥೆ„ìಸಿಕೊಳ್ಳುವ ಅಗತ್ಯವಿದೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್‌. ಮೆಂಡನ್‌ ಹೇಳಿದರು.

Advertisement

ಅವರು ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಎನ್‌.ಎಸ್‌.ಎಸ್‌. ಕೋಶ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಬಾ-ಬಾಪು 150ನೇ ಜನ್ಮ ವರ್ಷಾಚರಣೆ ಮತ್ತು ಎನ್ನೆಸ್ಸೆಸ್‌ ಸುವರ್ಣ ಮಹೋತ್ಸವ ಅಂಗವಾಗಿ ಆಯೋಜಿಸಿದ ರಾಜ್ಯ ಮಟ್ಟದ ಮಹಾತ್ಮಾ ಗಾಂಧಿ ತತ್ವ ಪ್ರಣೀತ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಎನ್‌.ಎಸ್‌.ಎಸ್‌. ಅಧಿಕಾರಿ ಮತ್ತು ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ| ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ ಗಾಂಧೀಜಿಯ ಆದರ್ಶಗಳು ವಿಶ್ವವ್ಯಾಪಿಯಾಗಿ ಮನ್ನಣೆಯನ್ನು ಗಳಿಸಿದ್ದು ಈ ಆದರ್ಶಗಳನ್ನು ಯುವಜನತೆ ಜೀವನ ಸೂರ್ತಿಯನ್ನಾಗಿಸಿಕೊಳ್ಳಬೇಕು ಎಂದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉದ್ಯಮಿ ಸುರೇಶ್‌ ಶೆಟ್ಟಿ ಗುರ್ಮೆ,ಉಡುಪಿ ತಾ. ಪಂ. ಅಧ್ಯಕ್ಷೆ ನೀತಾ ಗುರುರಾಜ್‌, ಬೊಮ್ಮರಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಸವಿತಾ ನಾಯಕ್‌, ಉಪಾಧ್ಯಕ್ಷ ಹರೀಶ್‌ ಸಾಲ್ಯಾನ್‌, ತಾ. ಪಂ.ಸದಸ್ಯೆ ಸಂಧ್ಯಾಕಾಮತ್‌, ಉಮೇಶ್‌ ಶೆಟ್ಟಿ, ಸುಂದರ ಕಾಂಚನ್‌, ಅಶೋಕ್‌ ಆಚಾರ್ಯ, ಕಾಲೇಜಿನ ಪ್ರಾಂಶುಪಾಲೆ ಡಾ| ನಿಕೇತನ, ಸುಜಯಾ , ವಿದ್ಯಾರ್ಥಿ ನಾಯಕರಾದ ಶಶಿಧರ್‌, ಅಶ್ವಿ‌ನಿ ಪೈ, ಕೃತಿಕ್‌, ಪದ್ಮಿನಿ ಮೊದಲಾದವರು ಉಪಸ್ಥಿತ ರಿದ್ದರು.ಪ್ರವೀಣ ಶೆಟ್ಟಿ ಸ್ವಾಗತಿಸಿ, ಸುಮನಾ ಬಿ. ಕಾರ್ಯಕ್ರಮ ನಿರೂಪಿಸಿ, ಸುಭಾಷ್‌ ಎಚ್‌.ಕೆ. ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next