Advertisement
ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರ ಸ್ಮರಣಾರ್ಥ ವಿಧಾನಸೌಧ ಮತ್ತು ವಿಕಾಸಸೌಧ ಮಧ್ಯೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ “ಸರ್ವೋದಯ ದಿನ’ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ನಾಥೂರಾಮ್ ಗೋಡ್ಸೆ ಗುಂಡಿಗೆ ಮಹಾತ್ಮಾ ಗಾಂಧೀಜಿ ಬಲಿಯಾಗಿದ್ದು, ಈ ದಿನ ದೇಶದ ಪಾಲಿಗೆ ಕರಾಳ ದಿನ. ಆದರೆ, ನಾಥೂರಾಮ್ ಗೋಡ್ಸೆ ಗುಂಡಿಕ್ಕಿ ಗಾಂಧೀಜಿಯನ್ನು ಹತ್ಯೆ ಮಾಡಿರುವುದನ್ನು ಮತೀಯವಾದಿಗಳು ಸಮರ್ಥಿಸಿಕೊಳ್ಳುತ್ತಿರುವುದು ದೊಡ್ಡ ದುರಂತ ಎಂದರು. ಗಾಂಧೀಜಿಯವರು ಪ್ರತಿಪಾದಿಸಿದ ಶಾಂತಿ-ಸಹಬಾಳ್ವೆ ಮತ್ತು ಜಾತ್ಯಾತೀತತತ್ವಗಳು ಇಂದಿಗೂ ಪ್ರಸ್ತುತ ಎಂದು ಸಿದ್ದರಾಮಯ್ಯ ಹೇಳಿದರು. ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ, ಗೋವಿಂದ್‌ರಾಜು ಮತ್ತಿತರರು ಇದ್ದರು.