Advertisement

ಗಾಂಧಿ ತತ್ವಗಳ ಆಚರಣೆಯೇ ಸಮಸ್ಯೆಗೆ ಪರಿಹಾರ: ಕೊಟ್ರಪ್ಪ

05:17 PM Mar 13, 2018 | |

ಬಳ್ಳಾರಿ: ರಾಷ್ಟ್ರಪತಿ ಮಹಾತ್ಮ ಗಾಂಧೀಜಿಯವರ ತತ್ವಗಳಿಂದ ದೇಶದಲ್ಲಿ ಪ್ರಸ್ತುತ ಉಂಟಾಗಿರುವ ಮತ್ತು ಪ್ರತಿದಿನ ಹುಟ್ಟಿಕೊಳ್ಳುತ್ತಿರುವ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಚೋರನೂರು ಕೊಟ್ರಪ್ಪ ಅಭಿಪ್ರಾಯಪಟ್ಟರು.

Advertisement

ನಗರದ ಎಎಸ್‌ಎಂ ಮಹಿಳಾ ಕಾಲೇಜಿನಲ್ಲಿ ಗಾಂಧೀಜಿಯವರ 150ನೇ ಜಯಂತಿ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
ಇಲಾಖೆ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಕಾಲೇಜು ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಗಾಂಧಿ ಧ್ವನಿ ಮತ್ತು ಬೆಳಕಿನ ಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು. ಗಾಂಧಿಧೀಜಿ ತತ್ವ-ಆದರ್ಶಗಳಿಂದ ದಿನೇ ದಿನೇ ವಿಮುಖರಾಗುತ್ತಿರುವ
ಪರಿಣಾಮ ಬಡತನ, ನಿರುದ್ಯೋಗ, ಅಸಮಾನತೆ, ಕೋಮುದ್ವೇಷ, ಭ್ರಷ್ಟಾಚಾರ, ಭಯೋತ್ಪಾದನೆ, ಅಸೂಯೆ ಭಾವನೆಯಂತ ಅನೇಕ ಸಮಸ್ಯೆಗಳು ಹುಟ್ಟಿಕೊಳ್ಳುತ್ತಿವೆ. ಇವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹರಸಾಹಸಪಡುತ್ತಿರುವುದನ್ನು ನಾವು ಕಾಣುತ್ತಿದ್ದೇವೆ ಎಂದ ಅವರು, ಗಾಂಧೀಜಿ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನಮ್ಮ ಸಮಸ್ಯೆಗಳು ನಿವಾರಣೆಯಾಗಲಿವೆ ಎಂದರು.

ಗಾಂಧಿವಾದಿ ಟಿ.ಜಿ.ವಿಠಲ್‌ ಮಾತನಾಡಿ, ಜೀವನ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ನಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಗಾಂಧೀಜಿ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳುವುದು ಅತ್ಯಂತ ಸೂಕ್ತ. ಗಾಂಧಿಧೀಜಿ ಬಳ್ಳಾರಿಗೆ ಎರಡು ಬಾರಿ ಭೇಟಿ ಮಾಡಿದ್ದರು. ಜಗತ್ತಿಗೆ ಅವರು ನೀಡಿದ ಕೊಡುಗೆ ಗಮನಿಸಿದ  ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಆಹಿಂಸಾ ದಿನವನ್ನಾಗಿ ಘೋಷಿಸಿ
ಆಚರಣೆ ಮಾಡಿಕೊಂಡು ಬರುತ್ತಿದೆ ಎಂದರು. ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದ
ಪ್ರಾಂಶುಪಾಲ ಡಾ.ಎಂ.ಪಂಪಾಪತಿ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರಾಮಲಿಂಗಪ್ಪ ಬಿ.ಕೆ ಹಾಗೂ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next