Advertisement
ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಆವನ ಹಾಗೂ ಹಾರ್ಟ್‌ಫುಲ್‌ನೆಸ್ ಇನ್‌ಸ್ಟಿಟ್ಯೂಟ್ ವತಿಯಿಂದ ಮಾನಸ ಗಂಗೋತ್ರಿಯ ಗಾಂಧಿ ಭವನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 69ನೇ ಸರ್ವೋದಯ ದಿನಾಚರಣೆಯಲ್ಲಿ ಮಾತನಾಡಿದರು.
Related Articles
Advertisement
ದೇಶದಲ್ಲಿರುವ ಕಪ್ಪು ಹಣವನ್ನು ಹೊರತರುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದ ನೋಟ್‌ಬ್ಯಾಣ್ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ವಿಯಾಗಲಿಲ್ಲ. ಕೇಂದ್ರ ಸರ್ಕಾರದ ನೋಟ್‌ಬ್ಯಾನ್ ನಿರ್ಧಾರದಿಂದ ಜನರಿಗೆ ತೊಂದರೆಯಾಗಿದ್ದು, ಸರಿಯಾದ ಮುನ್ನೆಚ್ಚರಿಕೆ ಇಲ್ಲದೆ ಕೈಗೊಂಡ ಈ ತೀರ್ಮಾನದಿಂದಾಗಿ ಬ್ಯಾಂಕ್‌ಗಳು, ಸೊಸೈಟಿಗಳು ಭ್ರಷ್ಟರ ಕೂಟದಲ್ಲಿ ಸೇರಿಕೊಂಡು ಮತ್ತಷ್ಟು ಕಪ್ಪು ಹಣವನ್ನು ಸಂಗ್ರಹಿಸಲು ಅವಕಾಶ ಕಲ್ಪಿಸಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾ ನಿಲಯದ ಪ್ರಭಾರ ಕುಲಪತಿ ಪ್ರೊ. ಯಶವಂತ ಡೋಂಗ್ರೆ, ಕುಲಸಚಿವ ಪ್ರೊ.ಆರ್. ರಾಜಣ್ಣ, ಪರೀûಾಂಗ ಕುಲಸಚಿವ ಪ್ರೊ.ಜೆ. ಸೋಮಶೇಖರ್, ಗಾಂಧಿ ಭವನ ನಿರ್ದೇಶಕ ಪ್ರೊ. ಎಸ್. ಶಿವರಾಜಪ್ಪ, ಹಾರ್ಟ್‌ಫುಲ್‌ನೆಸ್ ಇನ್ಸ್ಟಿಟ್ಯೂಟ್ ಸಂಯೋಜನಾಧಿಕಾರಿ ಕೆ. ಮಧುಸೂದನ್ ಹಾಜರಿದ್ದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅನ್ನವನ್ನೇ ಮತವನ್ನಾಗಿ ಪರಿವರ್ತಿಸಿಕೊಳ್ಳುವ ಮೂಲಕ ಜನರನ್ನು ಸೋಮಾರಿ ಹಾಗೂ ಭಿಕ್ಷುಕರನ್ನಾಗಿ ಮಾಡುತ್ತಿದೆ. ಸರ್ಕಾರವು ಅನ್ನಭಾಗ್ಯ ಯೋಜನೆ ನೀಡುವ ಬದಲು ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದರೆ ನಮ್ಮಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ನಿರ್ಮೂಲನೆ ಮಾಡಬಹುದಾಗಿದೆ.-ಡಾ. ಎಚ್.ಎಸ್. ದೊರೆಸ್ವಾಮಿ, ಸ್ವಾತಂತ್ರ್ಯ ಹೋರಾಟಗಾರ