Advertisement

Ganesh Chaturthi ಕರಾವಳಿಯಾದ್ಯಂತ ಗಣೇಶ ಹಬ್ಬಕ್ಕೆ ಸಕಲ ತಯಾರಿ

11:29 PM Sep 17, 2023 | Team Udayavani |

ಮಂಗಳೂರು/ಉಡುಪಿ: ಕರಾವಳಿಯಾದ್ಯಂತ ಗಣೇಶ ಚತುರ್ಥಿ ಸಂಭ್ರಮಕ್ಕೆ ಸರ್ವ ಸಿದ್ಧತೆ ಭರದಿಂದ ನಡೆದಿದ್ದು, ಸೋಮವಾರ ಗೌರಿ ಹಬ್ಬ ಹಾಗೂ ಮಂಗಳವಾರ ಗಣೇಶ ಹಬ್ಬ ಆಚರಣೆಯಾಗಲಿದೆ.

Advertisement

ಗಣೇಶನ ವಿಗ್ರಹಗಳ ತಯಾರಿ ಕೆಲಸಗಳು ಬಹುತೇಕ ಪೂರ್ಣಗೊಂಡು ಸಾರ್ವಜನಿಕವಾಗಿ ಗಣೇಶ ಮೂರ್ತಿ ಗಳನ್ನು ಪ್ರತಿಷ್ಠಾಪಿಸಲು ಭರ್ಜರಿ ಸಿದ್ಧತೆ ನಡೆಯುತ್ತಿದೆ. ವೈಭವದಿಂದ ಗಣೇಶೋತ್ಸವ ಆಚರಣೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಹಾಗೂ ಕೊಡಗು ಜಿಲ್ಲೆಯಾದ್ಯಂತ ತಯಾರಿ ನಡೆಯುತ್ತಿದ್ದು, ವ್ಯಾಪಾರ ಚಟುವಟಿಕೆ ಕೂಡ ಬಿರುಸುಗೊಂಡಿದೆ. ಸಾರ್ವಜನಿಕ ಗಣೇಶೋತ್ಸವ ಸಮಿತಿ ಗಳಿಂದ ಗಣೇಶೋತ್ಸವ ಆಚರಣೆ ಪೆಂಡಾಲ್‌ ನಿರ್ಮಾಣ ಕಾರ್ಯ ಸಹಿತ ವಿವಿಧ ತಯಾರಿಯಲ್ಲಿ ತೊಡಗಿಸಿ ಕೊಂಡಿದ್ದಾರೆ.

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಯ ವಿವಿಧ ಕಡೆ ಹೊರ ಜಿಲ್ಲೆಯ ಹೂವಿನ ವ್ಯಾಪಾರಿಗಳು ಬೀಡುಬಿಟ್ಟಿದ್ದು ಹೂವಿನ ವ್ಯಾಪಾರ ರವಿವಾರವೇ ಬಿರುಸಿನಿಂದ ನಡೆಯಿತು. ಕಬ್ಬು ವ್ಯಾಪಾರ ಜೋರಾಗಿ ನಡೆಯುತ್ತಿದೆ. ಹೊರ ಜಿಲ್ಲೆಗಳ ಕಬ್ಬು ಬೆಳೆಗಾರರು ಉಡುಪಿ, ಮಂಗಳೂರು ನಗರದ ವಿವಿಧೆಡೆ ಕಬ್ಬು ಮಾರಾಟದಲ್ಲಿ ತೊಡಗಿದ್ದಾರೆ.

ತೆನೆ ಹಬ್ಬ
ರವಿವಾರ ಕರಾವಳಿಯ ಕೆಲವೆಡೆ ತೆನೆ ಹಬ್ಬವನ್ನು ಆಚರಿಸಲಾಯಿತು.

ಮದ್ಯ ಮಾರಾಟ ನಿಷೇಧ
ಉಡುಪಿ: ಚೌತಿ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕೋರಿಕೆಯಂತೆ ಜಿಲ್ಲೆಯಲ್ಲಿ ಸೆ. 19, ಉಡುಪಿ ನಗರದಲ್ಲಿ ಸೆ. 21 ಮತ್ತು ಸೆ. 23ರಂದು ಡ್ರೈ ಡೇ ಘೋಷಿಸಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next