Advertisement
ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಮತ್ತು ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೀರು ಕಲುಷಿತವಾಗಿ, ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಪರಿಸರ ಪ್ರೇಮಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವಿಷಕಾರಿ ರಾಸಾಯನಿಕ, ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದಾಗಿದೆ.
Related Articles
Advertisement
ಅವೈಜ್ಞಾನಿಕ ವಿಸರ್ಜನೆಯ ಪರಿಣಾಮಗಳು:
ಬಾವಿ, ಕೆರೆ ಹಾಗೂ ಹೊಳೆಗಳಲ್ಲಿ ಗಣಪತಿ ವಿಗ್ರಹಗಳನ್ನು ವಿಸರ್ಜನೆ ಮಾಡುವುದರಿಂದ ಅಂತರ್ಜಲ, ಕುಡಿಯುವ ನೀರಿನ ಸೆಲೆಗಳು ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿಯನ್ನು ಸಿಡಿಸುವುದರಿಂದ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಉಂಟಾಗಿ, ಪರಿಸರಕ್ಕೆ ಹಾನಿಯಾಗುತ್ತದೆ.ಈ ಎಲ್ಲಾ ತಪ್ಪುಗಳಿಂದ ಪರಿಸರ ಮಾಲಿನ್ಯ ಉಂಟಾಗುವುದು ಸಹಜ. ನಮ್ಮ ಪರಿಸರದಲ್ಲಿ ನಾವೇ ಉಂಟುಮಾಡಿದ ಮಾಲಿನ್ಯಗಳು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತಂದೊಡ್ಡುತ್ತವೆ. ಅದಕ್ಕಾಗಿ ಆದರೂ ನಾವು ಎಚ್ಚೆತ್ತುಕೊಂಡು, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು.
ಒಟ್ಟಾರೆಯಾಗಿ ನಮ್ಮ ಸಂತೋಷದ ಸಲುವಾಗಿ ಗಣೇಶ ಹಬ್ಬದ ಆಚರಣೆ ನಮಗೆ ನೋವನ್ನು ತರಬಾರದು. ಹಾಗಾಗಿ ನಾವು ಒಂದಿಷ್ಟು ಒಳ್ಳೆಯ ಕೆಲಸ ಹಾಗೂ ಪ್ರತಿಜ್ಞೆಯ ಮೂಲಕ ಹಬ್ಬದ ಆಚರಣೆ ಮಾಡುವುದು ಸೂಕ್ತ. ಅದರಿಂದ ಆರೋಗ್ಯಕರ ಹಬ್ಬದ ಆಚರಣೆ ನಮ್ಮದಾಗುವುದು. ಗಣೇಶ ಹಬ್ಬದಲ್ಲಿ ರಸ್ತೆ ಬದಿಯಲ್ಲಿ ಹಾಗೂ ಚರಂಡಿಯಲ್ಲಿ ಕಸಗಳನ್ನು ಎಸೆಯದೇ ಕಸದ ಡಬ್ಬಿಗಳಿಗೆ ಹಾಕುವಂತೆ ಜಾಗೃತಿ ಅರಿವು ಮೂಡಿಸುವುದು ಪ್ರಜ್ಞಾವಂತ ನಾಗರಿಕರ ಕರ್ತವ್ಯವಾಗಬೇಕು.