Advertisement

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

09:26 AM Sep 08, 2024 | Team Udayavani |

ಈ ವರ್ಷ ಸೆಪ್ಟೆಂಬರ್‌ 07 ರಂದು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದೆ. ಈ ಹಬ್ಬದಲ್ಲಿ ಬೆಳ್ಳಿ ಗಣೇಶ ಅಥವಾ ಮಣ್ಣಿನಿಂದ ಮಾಡಿದ ಗಣೇಶ ಮೂರ್ತಿಯನ್ನು ಇಟ್ಟು, ಹಬ್ಬವನ್ನು ಆಚರಿಸಲಾಗುತ್ತದೆ. ಗಣೇಶನು ತಿಂಡಿ ಪ್ರಿಯ, ಹಾಗಾಗಿ ಅವನಿಗೆ ಇಷ್ಟವಾಗುವ ಮೋದಕ, ಕಡಬು, ಚಕ್ಕಲಿ, ಕೋಡುಬಳೆ ಸೇರಿದಂತೆ ವಿವಿಧ ಬಗೆಯ ತಿಂಡಿಗಳನ್ನು ಮಾಡಿ, ನೈವೇದ್ಯಕ್ಕೆ ಇಡುತ್ತಾರೆ. ಗಣೇಶನ ಮೂರ್ತಿಯನ್ನು ಕೇವಲ ಮನೆಯಲ್ಲಿ ಮಾತ್ರವಲ್ಲ, ಶಾಲಾ-ಕಾಲೇಜು, ಕಚೇರಿಗಳಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲೂ ವಿಶೇಷ ಗಾತ್ರದ ಗಣೇಶನನ್ನು ಇಟ್ಟು ಪೂಜೆ ಮಾಡಲಾಗುತ್ತದೆ.

Advertisement

ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಮತ್ತು ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೀರು ಕಲುಷಿತವಾಗಿ, ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಪರಿಸರ ಪ್ರೇಮಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವಿಷಕಾರಿ ರಾಸಾಯನಿಕ, ಲೋಹದ ಲೇಪದ ಪ್ಲಾಸ್ಟರ್‌ ಆಫ್‌ ಪ್ಯಾರಿಸ್ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದಾಗಿದೆ.

ಗಣೇಶ ಮೂರ್ತಿ ವಿಸರ್ಜನೆ ಹೇಗೆ ಇರಬೇಕು?

ಪಿಓಪಿ ಅಥವಾ ಬಣ್ಣವನ್ನು ಬಳಸಿದ ಮೂರ್ತಿಗಳನ್ನು ನೇರವಾಗಿ ಹೊಂಡ,ನದಿಗಳಿಗೆ ಬಿಡದೆ ಬಕೆಟ್‌ನಲ್ಲಿ ವಿಸರ್ಜಿಸಬೇಕು ಅಥವಾ ಮೂರ್ತಿಗಳನ್ನು ವಿಸರ್ಜಿಸಲು ಕಲ್ಯಾಣಿಗಳು ತಾತ್ಕಾಲಿಕ ಹೊಂಡಗಳನ್ನು ನಿರ್ಮಿಸಿ ಅದರಲ್ಲಿ ಮೂರ್ತಿಗಳನ್ನು ವಿಸರ್ಜಿಸುವುದು. ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತ್ರ, ಪ್ಲಾಸ್ಟಿಕ್‌ ಹಾರ ಎಲ್ಲವನ್ನೂ ತೆಗೆದು ನಂತರ ಮೂರ್ತಿಯನ್ನು ವಿಸರ್ಜನೆ ಮಾಡಬೇಕು.

Advertisement

ಅವೈಜ್ಞಾನಿಕ ವಿಸರ್ಜನೆಯ ಪರಿಣಾಮಗಳು:

ಬಾವಿ, ಕೆರೆ ಹಾಗೂ ಹೊಳೆಗಳಲ್ಲಿ ಗಣಪತಿ ವಿಗ್ರಹಗಳನ್ನು ವಿಸರ್ಜನೆ ಮಾಡುವುದರಿಂದ ಅಂತರ್ಜಲ, ಕುಡಿಯುವ ನೀರಿನ ಸೆಲೆಗಳು ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿಯನ್ನು ಸಿಡಿಸುವುದರಿಂದ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಉಂಟಾಗಿ, ಪರಿಸರಕ್ಕೆ ಹಾನಿಯಾಗುತ್ತದೆ.ಈ ಎಲ್ಲಾ ತಪ್ಪುಗಳಿಂದ ಪರಿಸರ ಮಾಲಿನ್ಯ ಉಂಟಾಗುವುದು ಸಹಜ. ನಮ್ಮ ಪರಿಸರದಲ್ಲಿ ನಾವೇ ಉಂಟುಮಾಡಿದ ಮಾಲಿನ್ಯಗಳು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತಂದೊಡ್ಡುತ್ತವೆ. ಅದಕ್ಕಾಗಿ ಆದರೂ ನಾವು ಎಚ್ಚೆತ್ತುಕೊಂಡು, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು.

ಒಟ್ಟಾರೆಯಾಗಿ ನಮ್ಮ ಸಂತೋಷದ ಸಲುವಾಗಿ ಗಣೇಶ ಹಬ್ಬದ ಆಚರಣೆ ನಮಗೆ ನೋವನ್ನು ತರಬಾರದು. ಹಾಗಾಗಿ ನಾವು ಒಂದಿಷ್ಟು ಒಳ್ಳೆಯ ಕೆಲಸ ಹಾಗೂ ಪ್ರತಿಜ್ಞೆಯ ಮೂಲಕ ಹಬ್ಬದ ಆಚರಣೆ ಮಾಡುವುದು ಸೂಕ್ತ. ಅದರಿಂದ ಆರೋಗ್ಯಕರ ಹಬ್ಬದ ಆಚರಣೆ ನಮ್ಮದಾಗುವುದು. ಗಣೇಶ ಹಬ್ಬದಲ್ಲಿ ರಸ್ತೆ ಬದಿಯಲ್ಲಿ ಹಾಗೂ ಚರಂಡಿಯಲ್ಲಿ ಕಸಗಳನ್ನು ಎಸೆಯದೇ ಕಸದ ಡಬ್ಬಿಗಳಿಗೆ ಹಾಕುವಂತೆ ಜಾಗೃತಿ ಅರಿವು ಮೂಡಿಸುವುದು ಪ್ರಜ್ಞಾವಂತ ನಾಗರಿಕರ ಕರ್ತವ್ಯವಾಗಬೇಕು.

ಗಣೇಶ ಹಬ್ಬದ ಅಂಗವಾಗಿ ನಾವು ಪಾಲಿಸಬೇಕಾದ ನಿಯಮಗಳು

1)ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಬೇಕು.

2)ಮಣ್ಣಿನಲ್ಲಿ ಕರಗದಂತಹ ರಾಸಾಯನಿಕ ವಸ್ತು ಹಾಗೂ ಪ್ಲಾಸ್ಟಿಕ್‌ ಬಳಕೆಯಿಂದ ದೂರ ಇರುವುದು ಸೂಕ್ತ.

3)ಬಾಳೆ ಎಲೆ ಅಥವಾ ಪುನಃ ಬಳಸಬಹುದಾದಂತಹ ಸ್ಟೀಲ್‌ ತಟ್ಟೆಯನ್ನು ಬಳಸಿ.

4)ರಾಸಾಯನಿಕ ಬಣ್ಣಗಳು ಬೇಡ.

5)ಪಟಾಕಿ ಮತ್ತು ಮನರಂಜನಾ ಶಬ್ದ ಮಾಲಿನ್ಯವನ್ನು ನಿಯಂತ್ರಿಸಿ.

6)ನೈಸರ್ಗಿಕ ಹೂವುಗಳ ಬಳಕೆ ಮಾಡಿ.

7)ವಿಸರ್ಜನೆಯೂ ಪರಿಸರ ಸ್ನೇಹಿಯಾಗಿರಬೇಕು.

8)ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸದೇ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು.

-ಬಸವರಾಜ ಎಂ. ಯರಗುಪ್ಪಿ

ಗದಗ

Advertisement

Udayavani is now on Telegram. Click here to join our channel and stay updated with the latest news.

Next