Advertisement

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

08:48 PM Sep 05, 2024 | Esha Prasanna |

ವಿಜಯಪುರ: ಗಣೇಶೋತ್ಸವ ಪ್ರಸಾದಕ್ಕೆ ಎಫ್‌ಎಸ್‌ಎಸ್‌ಎಐ(FSSAI)  ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ಪ್ರಸಾದ ಪಡೆಯಬೇಕೆಂಬ ನಿಯಮಾವಳಿ ಅವೈಜ್ಞಾನಿಕ ಹಾಗೂ ಹಿಂದೂ ಹಬ್ಬ, ಆಚರಣೆಗಳನ್ನು ಹತ್ತಿಕ್ಕುವ ಪ್ರಯತ್ನ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಕಿಡಿಕಾರಿದ್ದಾರೆ.

Advertisement

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಶಾಸಕ ಯತ್ನಾಳ್‌  ರಾಜ್ಯದ ಜನರ ಮೇಲೆ ಅಷ್ಟೊಂದು ಕಾಳಜಿ ಇದ್ದರೆ ಇದೇ ನಿಯಮವನ್ನು ಹೋಟೆಲ್‌, ಡಾಬಾ ಹಾಗೂ ಹಲಾಲ್‌ ಮಾಂಸವನ್ನು ಮಾರಾಟ ಮಾಡುವ ಅಂಗಡಿ-ಮುಂಗಟ್ಟುಗಳಿಗೂ ಅನ್ವಯಿಸಬೇಕಿತ್ತು. ಇನ್ನೇನು ಹಬ್ಬಕ್ಕೆ ಎರಡು ದಿನ ಬಾಕಿ ಇರಬೇಕಾದರೆ ಪಾಲಿಸಲಾಗದ ನಿಯಮವನ್ನು ಹೇರುವುದು ಸರ್ಕಾರದ ಹಿಂದೂ ವಿರೋಧಿ ನೀತಿ ತೋರಿಸುತ್ತದೆ ಎಂದು ತಮ್ಮ

ಅನ್ಯಕೋಮಿನ ಹಬ್ಬಗಳಲ್ಲಿ ಬೀದಿ ಬೀದಿಯಲ್ಲಿ ಪ್ರಾಣಿ ಬಲಿ ನೀಡಿ, ಅದರಿಂದ ಮಾಂಸ ಮಾರಾಟ ಮಾಡುವವರಿಗೂ ಈ ನಿಯಮ ಅನ್ವಯ ಆಗುತ್ತಾ? ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಆಹಾರ ತಯಾರು ಮಾಡಬೇಕಾದರೆ ಎಫ್‌ಎಸ್‌ಎಸ್‌ಎಐ ಪರವಾನಗಿ ಪಡೆದವರಿಂದ ಸರ್ಕಾರ ಮಾಡಿಸುತ್ತಿದೆಯಾ?

ಬೀದಿ ಬೀದಿಗಳಲ್ಲಿ ಕಳಪೆ ಗುಣಮಟ್ಟದ ಉತ್ಪನ್ನಗಳನ್ನು ಉಪಯೋಗಿಸಿ ತಿಂಡಿ, ಊಟ ತಯಾರಿಸುವವರಿಗೂ ಈ ನಿಯಮ ಅನ್ವಯ ಆಗುತ್ತಾ? ಶುಚಿತ್ವದ ಪಾಲನೆ ಸರಿ, ಆದರೆ ಹಬ್ಬಕ್ಕೆ ಎರಡು ದಿನ ಇರಬೇಕಾದರೆ ಎಫ್‌ಎಸ್‌ಎಸ್‌ಎಐ ಅನುಮೋದಿತ ವ್ಯಕ್ತಿ, ಸಂಸ್ಥೆಗಳಿಂದ ಪ್ರಸಾದ ತಯಾರಿಸಬೇಕೆಂಬ ಫರ್ಮಾನು ಹೊರಡಿಸುವ ಆದೇಶ ಕೂಡಲೇ ಹಿಂಪಡೆಯಬೇಕು ಎಂದು ಶಾಸಕ ಯತ್ನಾಳ್‌  ಆಗ್ರಹಿಸಿದ್ದಾರೆ.

ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್‌ಗಳಲ್ಲಿ ಪ್ರಸಾದವಾಗಿ ವಿತರಿಸಲಾಗುವ ಆಹಾರ ಪದಾರ್ಥಗಳ ಶುಚಿತ್ವ, ಗುಣಮಟ್ಟ ಮತ್ತು ಸುರಕ್ಷತೆಯ ಖಚಿತಪಡಿಸಿಕೊಳ್ಳಲು,  ಎಫ್‌ಎಸ್‌ಎಸ್‌ಎಐ ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ಪ್ರಸಾದ ಸಿದ್ಧಪಡಿಸುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು  ಆದೇಶಿಸಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next