ಪುಣೆ: ಪುಣೆ ಬಂಟರ ಸಂಘದ ವತಿಯಿಂದ ಆ. 31ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದ ಆರತಿ ಶಶಿಕಿರಣ್ ಶೆಟ್ಟಿ ಚಾವಡಿಯಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಬಾಳಿಕೆ ನೇತೃತ್ವದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು.
ವಿವಿಧ ಧಾರ್ಮಿಕ ವಿಧಿ ವಿಧಾನ ಗಳೊಂದಿಗೆ ಗಣೇಶನ ಪೂಜೆ ನಡೆಸಲಾ ಯಿತು. ಸೆ. 1ರಂದು ದಕ್ಷಿಣ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಭಜನ ಕಾರ್ಯಕ್ರಮ ಜರಗಿತು. ಸೆ. 2ರಂದು ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ, ಉತ್ತರ ಮತ್ತು ದಕ್ಷಿಣ ಪ್ರಾದೇಶಿಕ ಸಮಿತಿಯ ಪದಾ ಧಿಕಾರಿಗಳು ಉಪಸ್ಥಿತಿಯಲ್ಲಿ ಪೂಜೆ, ಆರತಿ ನಡೆದು ಶ್ರೀ ಗಣೇಶ ವಿಗ್ರಹವನ್ನು ವಿಸರ್ಜಿಸಲಾಯಿತು.
ಅತಿಥಿಯಾಗಿದ್ದ ಪುಣೆಯ ಹಿಂಜೆವಾಡಿ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ವಿವೇಕ್ ಮುಗಳಿಕರ್ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಹಾ ಆರತಿ ಬೆಳಗಿದರು. ಅನಂತರ ಸಂಘದ ವತಿಯಿಂದ ಅವರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಸಂಘದ ಮಹಿಳಾ ವಿಭಾಗದ ಸದಸ್ಯೆ ಯರಿಂದ ಭಜನ ಕಾರ್ಯಕ್ರಮ ನಡೆಯಿತು. ಗಣಪತಿ ದೇವರಿಗೆ ಮಹಾಮಂಗಳಾರತಿ ನಡೆದು ತೀರ್ಥಪ್ರಸಾದ ವಿತರಿಸಲಾಯಿತು. ಅನಂತರ ಗಣೇಶ ವಿಗ್ರಹವನ್ನು ಭವನದ ಆವರಣದಲ್ಲಿ ವಿಸರ್ಜಿಸಲಾಯಿತು.
ಕಾರ್ಯಕ್ರಮದಲ್ಲಿ ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಜತೆ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ನಿಟ್ಟೆ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು, ಜತೆ ಕೋಶಾ ಧಿಕಾರಿ ಪ್ರಶಾಂತ್ ಶೆಟ್ಟಿ ಹೆರ್ಡೆಬೀಡು, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್ ಪೂಂಜಾ ಮತ್ತು ಪದಾಧಿಕಾರಿಗಳು, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಶೇಖರ್ ಸಿ. ಶೆಟ್ಟಿ ಮತ್ತು ಪದಾಧಿಕಾರಿಗಳು, ಮಹಿಳಾ ವಿಭಾಗದ ದಿವ್ಯಾ ಎಸ್. ಶೆಟ್ಟಿ, ವೀಣಾ ಶೆಟ್ಟಿ, ಗೀತಾ ಶೆಟ್ಟಿ ಮತ್ತು ಸದಸ್ಯರು, ಯುವ ವಿಭಾಗದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.