Advertisement

Haveri: ಸಾಮೂಹಿಕ ಅತ್ಯಾಚಾರ ಪ್ರಕರಣ: ಮತ್ತಿಬ್ಬರ ಬಂಧನ

10:31 PM Jan 18, 2024 | Team Udayavani |

ಹಾವೇರಿ: ಹಾನಗಲ್ಲ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಮತ್ತಿಬ್ಬರು ಆರೋಪಿ ಗಳನ್ನು ಪೊಲೀಸರು ಬಂಧಿ ಸಿದ್ದಾರೆ.

Advertisement

ಅಕ್ಕಿಆಲೂರಿನ ಇಬ್ರಾಹಿಂ ಖಾದರ್‌ ಗೌಸ್‌ (27) ಹಾಗೂ ತೌಸೀಫ್‌ ಅಹ್ಮದ್‌ ಚೌಟಿ ಅಲಿಯಾಸ್‌ ಕಾಟ್ಲಾ ಖಾಸಿಂ ಸಾಬ್‌ (25) ಬಂಧಿತರು. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 10 ಆರೋಪಿಗಳನ್ನು ಬಂಧಿಸಿದಂತಾಗಿದೆ.

ಪೊಲೀಸರ ಅಮಾನತು
ಈ ನಡುವೆ ಕರ್ತವ್ಯಲೋಪದ ಆರೋಪದಲ್ಲಿ ಹಾನಗಲ್ಲ ಇನ್‌ಸ್ಪೆಕ್ಟರ್‌ ಮತ್ತು ಕಾನ್‌ಸ್ಟೆಬಲ್‌ ಸಹಿತ ಇಬ್ಬರನ್ನು ಅಮಾನತು ಮಾಡಲಾಗಿದೆ.

ಜ. 20ರಂದು ಪ್ರತಿಭಟನೆ
ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಮತ್ತು ಅತ್ಯಾಚಾರಿಗಳ ವಿಷಯದಲ್ಲಿ ಪೊಲೀಸ್‌ ಇಲಾಖೆಯ ಮೃದು ಧೋರಣೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಜ.20ರಂದು ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ, ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸ್ಥಳೀಯ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next