ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಐವರು ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ವಿಟ್ಲ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಾಮೂಹಿಕ ಅತ್ಯಾಚಾರದಿಂದ ಬಾಲಕಿ ಗರ್ಭಿಣಿಯಾಗಿರುವುದಾಗಿ ವರದಿ ತಿಳಿಸಿದೆ.
ಇದೀಗ ವಿಟ್ಲ ಪೊಲೀಸರು ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಎಸ್ಸೆಸ್ಸೆಲ್ಸಿ ವಿದ್ಯಾಭ್ಯಾಸದ ನಂತರ ಸಂತ್ರಸ್ತೆ ಬಾಲಕಿ ಮನೆಯಲ್ಲಿದ್ದು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿಯ ವ್ಯಕ್ತಿಯೊಬ್ಬ ಸೇರಿದಂತೆ ಐವರ ತಂಡ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿರುವುದಾಗಿ ಪೊಲೀಸ್ ಮೂಲಗಳು ವಿವರಿಸಿದೆ.
ನಿರಂತರ ಅತ್ಯಾಚಾರದ ಪರಿಣಾಮವಾಗಿ ಬಾಲಕಿ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದು ಬಂದಿದ್ದು, ಈ ವಿಷಯವನ್ನು ಯಾರಿಗೂ ಹೇಳದಂತೆ ಬಾಲಕಿಯನ್ನು ಬೆದರಿಸಿದ್ದಾರೆ ಎನ್ನಲಾಗಿದೆ.
ಬಾಲಕಿಯ ಮನೆಗೆ ಆಶಾ ಕಾರ್ಯಕರ್ತೆಯೊಬ್ಬರು ಭೇಟಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ ಎಂದು ವರದಿ ತಿಳಿಸಿದೆ.