Advertisement
ತಾಲೂಕಿನ ನರಸೀಪುರದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತ್ಯುತ್ಸವಕ್ಕೆ ದೋಣಿಗೆ ಹುಟ್ಟು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪರಿಶಿಷ್ಟ ವರ್ಗಕ್ಕೆ ಸೇರಲು ಈ ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರ್ಕಾರ ಈಗ ಪುನಃ ಕೇಳಿರುವ ಸ್ಪಷ್ಟೀಕರಣವನ್ನು ಸಂಬಂಧಿಸಿದ ಇಲಾಖೆಯಿಂದ ಮಾಹಿತಿ ತರಿಸಿ ಕೂಡಲೇ ಸ್ಪಷ್ಟೀಕರಣ ನೀಡಲಾಗುವುದು. ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕ್ರಮ ವಹಿಸಬೇಕು ಎಂದರು.
Related Articles
Advertisement
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಅಂಬಿಗರ ಚೌಡಯ್ಯನವರು 12ನೇ ಶತಮಾನದಲ್ಲೇ ಸಮಾಜದ ಕಟ್ಟುಪಾಡುಗಳನ್ನು ವಿರೋಧಿ ಸಿದ್ದರು. ಸಮಾಜದಲ್ಲೀಗ ದ್ವೇಷ, ಅಸೂಯೆ ಬೆಳೆಯುತ್ತಿರುವ ಹೊತ್ತಿನಲ್ಲಿ ಇಂತಹ ಮಹಾನ್ ವ್ಯಕ್ತಿಗಳು ಬರೆದಿರುವ ವಚನಗಳನ್ನು ಓದಬೇಕು. ಅವು ದ್ವೇಷ ದೂರ ಮಾಡಲು ಪ್ರೇರಣೆ ಎಂದರು.ಕಾರ್ಯಕ್ರಮದಲ್ಲಿ ನರಸೀಪುರ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಚರಮೂರ್ತಿ ಚರಂತೇಶ್ವರ ಮಠದ ಶರಣಬಸವ ದೇವರು, ಗುರುಮಹಾಂತ ಸ್ವಾಮೀಜಿ, ಜ್ಞಾನಪ್ರಕಾಶ ಸ್ವಾಮೀಜಿ, ಶಾಂತವೀರ ಸ್ವಾಮೀಜಿ, ಅನ್ನದಾನಿ ಬಸವಪ್ರಿಯ ಅಪ್ಪಣ್ಣ ಸ್ವಾಮೀಜಿ, ಬಸವಮಾಚಿದೇವ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ನಿಜಗುಣದೇವರು, ಯೋಗಾನಂದ ಸ್ವಾಮೀಜಿ, ಸಚಿವರಾದ ಶಿವಾನಂದ ಪಾಟೀಲ, ಮಾಂಕಾಳ ವೈದ್ಯ, ಸಂಸದ ಜಿ.ಎಂ. ಸಿದ್ದೇಶ ಸೇರಿ ಹಲವರು ಇದ್ದರು. ಆರ್ಥಿಕ, ಸಾಮಾಜಿಕ ಶಕ್ತಿ ಬೇಕು
ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಹಿಂದೆ ನಮ್ಮ ಅವಧಿ ಯಲ್ಲಿಯೇ ಮಾಡಲಾಯಿತು. ಆರ್ಥಿಕ ಶಕ್ತಿ ಇಲ್ಲದವರು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಿಲ್ಲ. ಸಮಸಮಾಜದ ಕನಸು ನನಸಾಗಲು ಆರ್ಥಿಕ, ಸಾಮಾಜಿಕ ಶಕ್ತಿ ಪ್ರತಿಯೊಬ್ಬರಿಗೂ ಬರಬೇಕು.
-ಸಿದ್ದರಾಮಯ್ಯ, ಸಿಎಂ ಅಂಬಿಗರ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಕೆಲ ಸ್ಪಷ್ಟೀಕರಣ ಕೇಳಲಾಗಿದ್ದು, ಅವುಗಳನ್ನು ರಾಜ್ಯ ಸರ್ಕಾರ ಕಳುಹಿಸಿಕೊಟ್ಟರೆ ಸಂಬಂಧಿ ಸಿದ ಅ ಧಿಕಾರಿಗಳು, ಸಚಿವರು, ಸಮುದಾಯದ ಮುಖಂಡರನ್ನು ಕರೆಸಿ ಚರ್ಚಿಸಿ ಎಸ್‌ಟಿ ಸೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
-ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ