Advertisement

ಗ್ರಾಮೀಣ ಪೊಲೀಸರ ಯಶಸ್ವಿ ಕಾರ್ಯಾಚರಣೆ : ನಾಲ್ವರ ಸೆರೆ, 17.33 ಲಕ್ಷ ಮೌಲ್ಯದ ಚಿನ್ನಾಭರಣ ವಶ

08:47 PM Apr 30, 2022 | Team Udayavani |

ಗಂಗಾವತಿ : ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಿಂದ 8 ಚಿನ್ನಾಭರಣ ದೋಚಿದ ಕಳ್ಳತನ ಪ್ರಕರಣ ದಾಖಲಾಗಿದ್ದವು .ಜಿಲ್ಲಾ ಪೊಲೀಸ್ ವರಿಷ್ಠಾಧಿಕರಿ ಅರುಣಾಂಶು ಗಿರಿ ಇವರ ಮಾರ್ಗದರ್ಶನದಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ತೀವ್ರ ಕಾರ್ಯಾಚರಣೆ ನಡೆಸಿ ಇಬ್ಬರು ಕಳ್ಳರು ಮತ್ತು ಇನ್ನೂ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರನ್ನು ಬಂಧಿಸಿ ಅವರಿಂದ 17.33ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ .

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ಮಹೆಬೂಬ್ ನಗರದ ಮೊಹಮ್ಮದ್ ಅಜ್ಮೀರ್ ಹಾಗೂ ಗೌಸಿಯಾ ಕಾಲೊನಿಯ ಮಹಮ್ಮದ್ ಖಾನ್ ಸೇರಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ ಎಂದು ಡಿವೈಎಸ್ ಪಿ ರುದ್ರೇಶ್ ಉಜ್ಜನಕೊಪ್ಪ ತಿಳಿಸಿದ್ದಾರೆ .

ಶೀಘ್ರದಲ್ಲೇ ಪ್ರಕರಣದಲ್ಲಿರುವ ಆರೋಪಿಗಳನ್ನ ಬಂಧಿಸಿ ಚಿನ್ನಾಭರಣವನ್ನು ವಶಕ್ಕೆ ಪಡೆದಿರುವ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳ ಕ್ರಮವನ್ನು ಎಎಸ್ಪಿ ಅರುಣಾಂಗ್ಶು ಗಿರಿ ಪ್ರಶಂಸೆ ಮಾಡಿದ್ದಾರೆಂದು ಉಜ್ಜನಕೊಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ : ಉಳ್ಳಾಲ : ಮಸೀದಿಯೊಳಗೆ ನುಗ್ಗಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ಆರೋಪಿ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next