Advertisement

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

09:06 PM Jul 03, 2024 | Team Udayavani |

ಗಂಗಾವತಿ: ಮಹಿಳೆಯೊಬ್ಬರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ತಾಲ್ಲೂಕಿನ ವಿರೂಪೂರಗಡ್ಡಿಯ ತುಂಗಭದ್ರಾ ನದಿ ಬಳಿ ಪತ್ತೆಯಾಗಿದೆ.

Advertisement

ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಹಾಗೂ ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಮಾರು 15 ದಿನಗಳ ಹಿಂದೆ ಮಹಿಳೆಯ ಸಾವಾಗಿರಬಹುದು ಎಂದು ಅಂದಾಜಿಸಲಾಗುತ್ತಿದ್ದು ,ಮೃತ ದೇಹ ಕೊಳೆತ ಸ್ಥಿತಿಯಲ್ಲಿದ್ದು ಕೈ ಕಾಲು ಮೂಳೆಗಳು ದೇಹದಿಂದ ಬೇರೆಯಾಗಿದ್ದು ಬಲಗೈ ಮೇಲೆ ಅಮ್ಮ ಎಂದು ಅಚ್ಚೆ ಹಾಕಲಾಗಿದೆ.

ಗ್ರಾಮೀಣ ಪೊಲೀಸರು ಸಂಶಯಾಸ್ಪದ ಸಾವು ಎಂದು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದು ಸಂಬಂಧಪಟ್ಟವರು ಗ್ರಾಮೀಣ ಪೊಲೀಸರನ್ನು ಸಂಪರ್ಕಿಸುವಂತೆ ಗ್ರಾಮೀಣ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next