Advertisement

ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

06:42 PM Jul 06, 2022 | Team Udayavani |

ಗಂಗಾವತಿ : ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟ ಘಟನೆಗೆ ಕಾರಣನಾದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶ ಎಂ.ಜಿ. ಶಿವಳ್ಳಿಯವರು ಕಲಂ 448 ಅನ್ವಯ ಒಂದು ವರ್ಷ ಜೈಲು ಶಿಕ್ಷೆ ಒಂದು ಸಾವಿರ ರೂ.ದಂಡ ಹಾಗೂ 302 ಕಲಂ ಅನ್ವಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Advertisement

ತಾಲೂಕಿನ ಸಂಗಾಪೂರ ಗ್ರಾಮದಲ್ಲಿ 2015 ಜು. 27 ರಂದು ವಿಧವೆಯೊರ್ವಳು ತನ್ನ ಚಿಕ್ಕ ಮಗನ ಜತೆ ವಾಸವಾಗಿರುವ ಸಮಯದಲ್ಲಿ ಸಂಗಾಪೂರ ಗ್ರಾಮದ ಬಾಲಪ್ಪ ತಂದೆ ಗೋವಿಂದಪ್ಪ ಎಂಬ ಆರೋಪಿ ವಿಧವೆಯ ಮನೆಗೆ ತೆರಳಿ ಲೈಂಗಿಕ ಕ್ರಿಯೆಗೆ ಕರೆದಿದ್ದಾನೆ. ವಿಧವೆ ನಿರಾಕರಿಸಿ ಕೂಗಾಡಿದ್ದರಿಂದ ಅವಳನ್ನು ಕೊಲೆ ಮಾಡುವ ಉದ್ದೇಶದಿಂದ ಅಲ್ಲಿದ್ದ ಸೀಮೆ ಎಣ್ಣೆಯನ್ನು ವಿಧವೆ ಮಹಿಳೆ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ.

ಇದರಿಂದ ಮಹಿಳೆ ಗಂಭೀರ ಗಾಯಗೊಂಡಿದ್ದು ಗಂಗಾವತಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದ್ದಾಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ 2015 ಆ.01 ರಂದು ಮಹಿಳೆ ಮೃತಪಟ್ಟಿದ್ದರು.

ಇದನ್ನೂ ಓದಿ : ಹೈಕೋರ್ಟ್ ಸೂಚನೆಯಂತೆ ವಿರೂಪಾಪೂರಗಡ್ಡಿ ಹಳೆ ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ

ಗ್ರಾಮೀಣ ಪೊಲೀಸ್ ಠಾಣೆಯ ಅಂದಿನ ಸಿಪಿಐ ಆಗಿದ್ದ ಪ್ರಭಾಕರ್ ಧರ್ಮಟ್ಟಿ ಪ್ರಕರಣದ ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Advertisement

ವಿಚಾರಣೆಯ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಧಾರರ ಸಾಕ್ಷ್ಯ ಮತ್ತು ದಾಖಲೆಗಳನ್ನು ಪರಿಶೀಲಿಸಿ ಒಂದನೇಯ ಹೆಚ್ಚುವರಿ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶ ಎಂ.ಜಿ. ಶಿವಳ್ಳಿಯವರು ಕಲಂ 448 ಅನ್ವಯ ಒಂದು ವರ್ಷ ಜೈಲು ಶಿಕ್ಷೆ ಒಂದು ಸಾವಿರ ರೂ. ದಂಡ ಹಾಗೂ 302 ಕಲಂ ಅನ್ವಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಜತೆಗೆ ಮೃತಗಳ ಸಾವಿಗೆ ಪರಿಹಾರಕ್ಕಾಗಿ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವಂತೆ ಮೃತಳ ಪುತ್ರನಿಗೆ ಸೂಚನೆ ನೀಡಿದ್ದಾರೆ.

ಅಭಿಯೋಜನಾ ಪರವಾಗಿ ಸರಕಾರಿ ಅಭಿಯೋಜಕಿ ನಾಗಲಕ್ಷ್ಮಿ ಎಸ್ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next