ಗಂಗಾವತಿ: ಐತಿಹಾಸಿಕ ಸ್ಥಳ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಯಲ್ಲಿ ಇತಿಹಾಸದಲ್ಲಿ ಉಲೇಖವಾಗಿರುವ ಆನೆಗೊಂದಿ ಉತ್ಸವದ ಮೆರವಣಿಗೆಗೆ ಗಂಗಾವತಿ ಶಾಸಕರಾದ ಜಿ. ಜನಾರ್ಧನ ರೆಡ್ಡಿ ಅವರು ಅಂಬಾರಿಯಲ್ಲಿನ ಶ್ರೀ ಆದಿಶಕ್ತಿ ದುರ್ಗಾದೇವಿ ಮೂರ್ತಿಗೆ ಪೂಜೆ ಸಲ್ಲಿಸಿ ಬಳಿಕ ಪುಷ್ಪ ಅರ್ಪಿಸುವ ಮೂಲಕ ಚಾಲನೆ ನೀಡಿದರು.
Advertisement
ಸಮೀಪದ ಶ್ರೀ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ರಾಜಬೀದಿಯ ಮೂಲಕ ಗಗನ್ ಮಹಲ್‌ವರೆಗೆ ನಡೆಯಿತು. ಮೆರವಣಿಗೆಯಲ್ಲಿ ಶ್ರೀ ಆದಿಶಕ್ತಿ ದುರ್ಗಾದೇವಿ ಮೂರ್ತಿಯನ್ನು ಹೊತ್ತು ರಾಜ ಗಾಂಭಿರ್ಯದೊಂದಿಗೆ ಬಂದ ಗಜರಾಜನ ನಡಿಗೆ ವೈಭವ ನೋಡಲು ಜನಸಾಗರವೇ ಸೇರಿಕೊಂಡಿತ್ತು.
ಅಂಬಾರಿ ಮೆರವಣಿಗೆಯ ಮೆರಗನ್ನು ಹೆಚ್ಚಿಸಿತು. ಅಂಬಾರಿಯನ್ನು ಹೊತ್ತ ಆನೆಯ ಹೆಸರು ಲಕ್ಷ್ಮೀ ಈ ಆನೆಯು ಪಕ್ಕದ ವಿಜಯನಗರ ಜಿಲ್ಲೆಯ ಹಂಪಿ ವಿರೂಪಾಕ್ಷೇಶ್ವರ ಸನ್ನಿಧಿಗೆ ಸೇರಿದ್ದು, ಇತ್ತೀಚೆಗೆ ನಡೆದ ಕನಕಗಿರಿ ಉತ್ಸವವದಲ್ಲಿಯೂ ಪಾಲ್ಗೊಂಡು ಗಮನ ಸೆಳೆದಿತ್ತು. ಈಗ ಮತ್ತೆ ಆನೆಗೊಂದಿ ಉತ್ಸವಕ್ಕಾಗಿ ನಮ್ಮ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದು ವಿಶೇಷವಾಗಿತ್ತು.
Related Articles
ನಿರ್ದೇಶಕರಾದ ಕೊಟ್ರೇಶ ಮರಬನಹಳ್ಳಿ ಗಂಗಾವತಿ ತಹಶೀಲ್ದಾರ್‌ರಾದ ಯು. ನಾಗರಾಜ, ತಾಪಂ ಇಒ ಲಕ್ಷ್ಮೀದೇವಿ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
ಗಮನ ಸೆಳೆದ ಮಳಿಗೆಗಳುಗಂಗಾವತಿ: ಆನೆಗೊಂದಿ ಉತ್ಸವ-2024ರ ಪ್ರಯುಕ್ತ ಶ್ರೀ ರಂಗದೇವರಾಯಲು ವೇದಿಕೆ ಮುಂಭಾಗದಲ್ಲಿ ಆಯೋಜಿಸಿದ್ದ ವಿವಿಧ ವಸ್ತುಗಳ ಪ್ರದರ್ಶನ ಮಳಿಗೆಗಳು ಸಾರ್ವಜನಿಕರ ಗಮನ ಸೆಳೆದವು. ಮಳಿಗೆಗಳಲ್ಲಿ ದಿ ಕಿಷ್ಕಿಂದ ಟ್ರಸ್ಟ್ ವತಿಯಿಂದ ಮೆಕ್ಕೆಜೋಳ, ಬಾಳೆ ಮತ್ತು ಇತರೆ ಒಣಗಿದ ಎಲೆಗಳಿಂದ ಮಾಡಿದ ಗೃಹಲಂಕಾರ ವಸ್ತುಗಳ ಪ್ರದರ್ಶನ, ಬಂಗಾಲಿ ಟ್ರಸ್ಟ್‌ನಿಂದ ವಿವಿಧ ಖಾದ್ಯಗಳ ಪ್ರದರ್ಶನ ಮತ್ತು ಮಾರಾಟ, ಗಂಗಾವತಿಯ ಈಶ್ವರೀಯ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದಿಂದ ಅಧ್ಯಾತ್ಮ ಚಿತ್ರದ ಪ್ರದರ್ಶನ ಮತ್ತು ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ, ಗಂಗಾವತಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಿಂದ ಅಂಗನವಾಡಿಯ ಮಕ್ಕಳ ಆಟಿಕೆ ವಸ್ತು ಹಾಗೂ ಇತರೆ ವಸ್ತುಗಳ ಪ್ರದರ್ಶನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರಿನ ಸೇವೆಗಳು, ಪಂಪಾ ವಿರೂಪಾಕ್ಷೇಶ್ವರ ಸ್ವ-ಸಹಾಯ ಸಂಘದಿಂದ ವಿವಿಧ ಅಡುಗೆ ಪದಾರ್ಥ ಪದರ್ಶನ ಮತ್ತು ಮಾರಾಟ, ಧಾತ್ರಿ ಸ್ವ-ಸಹಾಯ ಸಂಘದಿಂದ ಮುಂಬತ್ತಿ ಮತ್ತು ಕೈಚೀಲಗಳ ಪ್ರದರ್ಶನ ಮತ್ತು ಮಾರಾಟ, ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅರಿವು ಮತ್ತು ಪ್ರದರ್ಶನ ಮಳಿಗೆ ಹಾಗೂ ಸ್ವ-ಸಹಾಯ ಗುಂಪುಗಳ ಸದಸ್ಯರು ತಯಾರಿಸಿದ ವಿವಿಧ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಸೇರಿದಂತೆ ಒಟ್ಟು 24 ಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಲಾಗಿದೆ. *ಶ್ರೀನಿವಾಸ ಪೂಜಾರ