ಗಂಗೊಳ್ಳಿ:ಕೋವಿಡ್, ಲಾಕ್ ಡೌನ್ ನಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರಿಗಿಂತ ಪೋಷಕರ ಪಾತ್ರವೇ ಹೆಚ್ಚು ಮಹತ್ವದ್ದಾಗಿದೆ ಎಂದು ಕೋಟೇಶ್ವರದ ಗೀತಾ ಎಚ್.ಎಸ್.ಎನ್ ಫೌಂಡೇಶನ್ ಟ್ರಸ್ಟ್ ನ ವ್ಯವಸ್ಥಾಪಕರಾದ ಶಂಕರ್ ಐತಾಳ್ ಹೇಳಿದರು.
ಇದನ್ನೂ ಓದಿ:ಸಚಿವರಿಗೆ ಜನರ ಸಂಕಷ್ಟ ಪರಿಹಾರವಾಗಬೇಕಿಲ್ಲ, ವಿಜಯೋತ್ಸವಗಳು ಬೇಕು: ಕುಮಾರಸ್ವಾಮಿ ಕಿಡಿ
ಅವರು ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ತಮ್ಮ ಗೀತಾ ಎಚ್.ಎಸ್.ಎನ್ ಫೌಂಡೇಶನ್ ಕೋಟೇಶ್ವರ(ರಿ) ಇದರ ವತಿಯಿಂದ 75 ಸಾವಿರ ರೂ. ಮೌಲ್ಯದ ನೋಟ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ, ಸಾಂಕೇತಿಕವಾಗಿ ನಡೆದ ಸಭೆಯಲ್ಲಿ ಮಾತನಾಡಿದರು.
ಸರಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಹೆಚ್ಚು ಧೈರ್ಯವಂತರು, ಬುದ್ಧಿವಂತರಾಗಿರುತ್ತಾರೆ. ಆ ನೆಲೆಯಲ್ಲಿ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಲು ಪೋಸಕರು ಯಾವುದೇ ಕಾರಣಕ್ಕೂ ಹಿಂದೇಟು ಹಾಕಬಾರದು ಎಂದರು.
75 ಸಾವಿರ ಮೌಲ್ಯದ ನೋಟ್ ಪುಸ್ತಕಗಳನ್ನು ಟ್ರಸ್ಟ್ ನ ವ್ಯವಸ್ಥಾಪಕರಾದ ಶಂಕರ್ ಐತಾಳ್ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಸುಮತಿ ಹಾಗೂ ಎಸ್ ಡಿಎಂಸಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಶನ್ ಕೊಡ ಮಾಡುವ ಉಚಿತ ಮಾಸ್ಕ್ ಅನ್ನು ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ನ ವಸಂತ್ ಗಿಳಿಯಾರ್ ಅವರು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಸಿ ಅಧ್ಯಕ್ಷ ರವಿಶಂಕರ್ ಖಾರ್ವಿ ವಹಿಸಿದ್ದರು. ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸುಮತಿ ಎಂ.ಗಂಗೊಳ್ಳಿ, ಪತ್ರಕರ್ತ ರಾಘವೇಂದ್ರ ಪೈ, ಸಿಆರ್ ಪಿ ಸೌರ್ಪಣಿಕಾ, ಪತ್ರಕರ್ತ ವಸಂತ್ ಗಿಳಿಯಾರ್, ಅಜಿತ್ ಶೆಟ್ಟಿ ಕಿರಾಡಿ ಉಪಸ್ಥಿತರಿದ್ದರು.
ಶಿಕ್ಷಕಿ ಸುಜಾತಾ ಪ್ರಾರ್ಥನೆ ಹಾಡಿದರು, ಶಾಲಾ ಮುಖ್ಯೋಪಾಧ್ಯಾಯಿನಿ ಸುಮತಿ ಎಂ. ಸ್ವಾಗತಿಸಿದರು. ದೈಹಿಕ ಶಿಕ್ಷಕ ಉಮೇಶ್ ಕುಂದರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶಶಿಶಂಕರ್ ವಂದಿಸಿದರು.