Advertisement

ಗಂಗೊಳ್ಳಿ: ಕುಸಿಯುತ್ತಿದೆ ಬ್ರೇಕ್‌ವಾಟರ್‌

11:12 PM May 31, 2020 | Sriram |

ಗಂಗೊಳ್ಳಿ: ಕಡಲ್ಕೊರೆತ ತಡೆಗಾಗಿ ಗಂಗೊಳ್ಳಿಯಲ್ಲಿ ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಿದ ಬ್ರೇಕ್‌ವಾಟರ್‌ ಈಗ ಕುಸಿಯುತ್ತಿದ್ದು, ಮೀನುಗಾರಿಕೆಗೆ ತೊಂದರೆಯಾಗುವ ಆತಂಕ ಎದುರಾಗಿದೆ. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎನ್ನುವ ಆರೋಪ ಮೀನುಗಾರರಿಂದ ಕೇಳಿ ಬಂದಿದೆ.

Advertisement

ಕೋಡಿಯಲ್ಲಿ ಸುಮಾರು 900 ಮೀ. ಹಾಗೂ ಗಂಗೊಳ್ಳಿಯಲ್ಲಿ 700 ಮೀ. ಉದ್ದದ 102 ಕೋ.ರೂ. ವೆಚ್ಚದ ಬ್ರೇಕ್‌ ವಾಟರ್‌ ಕಾಮಗಾರಿ ಕಳೆದ ವರ್ಷ ಪೂರ್ಣಗೊಂಡಿತ್ತು. ಇದರಲ್ಲಿ ಗಂಗೊಳ್ಳಿ ಭಾಗದಲ್ಲಿ ಟೆಟ್ರಾಫೈಡ್‌ ಹಾಗೂ ಕಲ್ಲುಗಳನ್ನು ಹಾಕಿ ನಿರ್ಮಿಸಲಾದ 700 ಮೀ. ಉದ್ದದ ಬ್ರೇಕ್‌ ವಾಟರ್‌ನಲ್ಲಿ ಒಂದೊಂದೇ ಕಲ್ಲುಗಳು ಸಮುದ್ರ ಸೇರುತ್ತಿವೆ.

ಕೋಟ್ಯಂತರ ರೂ. ಖರ್ಚು ಮಾಡಿ, ಬಹಳಷ್ಟು ವರ್ಷಗಳ ಕಾಲ ಬಾಳಿಕೆ ಬರಲೆಂದು ನಿರ್ಮಿಸಿದ ಬ್ರೇಕ್‌ವಾಟರ್‌ ಕಾಮಗಾರಿ ಪೂರ್ಣಗೊಂಡು ಕೇವಲ ಒಂದೆರಡು ವರ್ಷಗಳಲ್ಲಿಯೇ ಕುಸಿದು ಹೋಗುವುದಾದರೆ ಹೇಗೆ? ಸರಿಯಾಗಿ ರೂಪುರೇಶೆಗಳನ್ನು ಮಾಡಿಕೊಂಡು, ಇಲ್ಲಿನ ಮೀನುಗಾರರ ಅಭಿಪ್ರಾಯಗಳನ್ನು ಕೂಡ ಪರಿಗಣನೆಗೆ ತೆಗೆದುಕೊಂಡಿದ್ದರೆ ಈ ರೀತಿ ಆವಾಂತರಗಳು ಆಗುತ್ತಿರಲಿಲ್ಲ ಎನ್ನುವುದು ಮೀನುಗಾರರ ಆರೋಪವಾಗಿದೆ.

ಇಂದು ಭೇಟಿ
“ಉದಯವಾಣಿ’ಯೊಂದಿಗೆ ಮಾತನಾಡಿದ ಉಡುಪಿಯ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಎಂಜಿನಿಯರ್‌ ಉದಯಕುಮಾರ್‌, ಬ್ರೇಕ್‌ ವಾಟರ್‌ ಕಾಮಗಾರಿಯ ಕುಸಿತದ ಬಗ್ಗೆ ಗಮನಕ್ಕೆ ಬಂದಿದ್ದು, ಜೂ. 1ರಂದು ಸ್ವತಃ ಅಲ್ಲಿಗೆ ಭೇಟಿ ನೀಡಿ ಪರಿ ಶೀಲನೆ ನಡೆಸಲಾಗುವುದು. ಕಾಮಗಾರಿ ನಿರ್ವಹಿಸಿದ ಗುತ್ತಿಗೆ ದಾರರನ್ನೂ ಕರೆಯಲಾಗಿದೆ ಎಂದವರು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next