ದಿನಗಳಿಂದ ಸ್ಥಗಿತಗೊಂಡಿದೆ. ಈ ಮೂಲಕಸುಮಾರು 12 ಕೋ.ರೂ. ವೆಚ್ಚದ ಕಾಮಗಾರಿಗೆ ಮೊದಲ ವಿಘ್ನ ಉಂಟಾಗಿದೆ.
Advertisement
ಬಾಕಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಜೆಟ್ಟಿಯ ಪುನರ್ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದೆ ಎನ್ನಲಾಗಿದೆ. ಕಳೆದ ವರ್ಷಎಪ್ರಿಲ್ ತಿಂಗಳಿನಲ್ಲಿ ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿ ಆರಂಭಿಸಿದ್ದ ಗುತ್ತಿಗೆದಾರ ಕಂಪೆನಿ ಈವರೆಗೆ ಸುಮಾರು 50-60 ಮೀ. ಉದ್ದದ ಜೆಟ್ಟಿ ಕಾಮಗಾರಿ ನಿರ್ವಹಿಸಿದೆ. ಇದೀಗ ಹಠಾತ್ತನೆ ಕಾಮಗಾರಿ ಸ್ಥಗಿತಗೊಳಿಸಿ ಸ್ಥಳದಲ್ಲಿದ್ದ ಬಹುತೇಕ ಎಲ್ಲ ಯಂತ್ರೋಪಕರಣಗಳನ್ನು ಬೇರೆಡೆ ಸಾಗಿಸ ಲಾಗಿದೆ. ಇದು ಸ್ಥಳೀಯ ಮೀನುಗಾರರ ಆತಂಕಕ್ಕೆ ಕಾರಣವಾಗಿದೆ.
ಮುಂದಿನ ಒಂದು ವಾರದೊಳಗೆ ಕಾಮಗಾರಿ ಪುನರಾರಂಭಿಸದಿದ್ದಲ್ಲಿ ಪ್ರತಿಭಟನೆ ನಡೆಸಲು ಮೀನುಗಾರರು ಸಿದ್ಧತೆ
ನಡೆಸುತ್ತಿದ್ದಾರೆ. ಸರಕಾರ ಹಾಗೂ ಗುತ್ತಿಗೆದಾರರ ನಡುವಿನ ತಿಕ್ಕಾಟದಲ್ಲಿ ಇಲ್ಲಿನ ಮೀನುಗಾರರು ಹೈರಾಣಾಗಿದ್ದಾರೆ. ಕಾಮಗಾರಿ ಪ್ರಾರಂಭವಾಯಿತೆಂಬ ಖುಷಿಯಲ್ಲಿದ್ದ ಮೀನುಗಾರರಲ್ಲಿ ಮತ್ತೆ ಆತಂಕ ಮೂಡಿದೆ. ಎರಡು ವರ್ಷಗಳಿಂದ
2018ರ ಅ. 13ರಂದು ಕುಸಿದು ಬಿದ್ದ ಗಂಗೊಳ್ಳಿ ಮೀನುಗಾರಿಕೆ ಬಂದರಿನ ಜೆಟ್ಟಿಯು ಕಳೆದ ಮೂರು ವರ್ಷಗಳಿಂದ ಮೀನುಗಾರರ ಪ್ರಯೋಜನಕ್ಕೆ ಸಿಕ್ಕಿಲ್ಲ. ಎರಡನೇ ಹರಾಜು ಪ್ರಾಂಗಣದ ಜೆಟ್ಟಿಯ ಸ್ಲಾÂಬ್ ಕುಸಿದು ಬರೋಬ್ಬರಿ ಎರಡು ವರ್ಷಗಳ ಬಳಿಕ ಜೆಟ್ಟಿ ಪುನರ್ ನಿರ್ಮಾಣ ಕಾರ್ಯ ಆರಂಭಗೊಂಡಿತ್ತು. 2021ರ ಫೆ.26ರಂದು ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿಗೆ ಬೆ„ಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಚಾಲನೆ ನೀಡಿದ್ದರು.
Related Articles
ಇದರ ಸಂಪೂರ್ಣ ಪುನರ್ ನಿರ್ಮಿಸಲು ಸಂಸದ ಬಿ. ವೈ. ರಾಘವೇಂದ್ರ, ಶಾಸಕಬಿ.ಎಂ. ಸುಕುಮಾರ್ ಶೆಟ್ಟಿ ಮನವಿ
ಯಂತೆ ಅಂದಿನ ಮೀನುಗಾರಿಕಾ ಸಚಿವಕೋಟ ಶ್ರೀನಿವಾಸ ಪೂಜಾರಿ ಮುತುವರ್ಜಿಯಲ್ಲಿ 12 ಕೋ.ರೂ. ಮಂಜೂ
ರಾತಿಗೆ 2020ರ ಫೆ. 16 ರಂದು ನಡೆದ ರಾಜ್ಯ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿತ್ತು.
Advertisement
ಬರೀ 150 ಮೀ.300ಕ್ಕೂ ಅಧಿಕ ಪರ್ಸಿನ್ ಬೋಟುಗಳು, 600ಕ್ಕೂ ಮಿಕ್ಕಿ ಬೋಟು ಹಾಗೂ 500ಕ್ಕೂ ಅಧಿಕ ನಾಡದೋಣಿಗಳಿದ್ದು, ಸಾವಿರಾರು ಮೀನುಗಾರರು ಅವಲಂಬಿಸಿರುವ ಬಂದರು ಇದಾಗಿದೆ. ಆದರೆ ಸುಮಾರು 405 ಮೀ. ಉದ್ದದ ಮೀನುಗಾರಿಕಾ ಜೆಟ್ಟಿಯಲ್ಲಿ ಈಗ ಕೇವಲ 150ಮೀ. ಮಾತ್ರ ಮೀನುಗಾರರ ಉಪಯೋಗಕ್ಕೆ ಸಿಗುತ್ತಿದೆ. ಇದರಿಂದ ಬೋಟ್, ದೋಣಿಗಳನ್ನು ನಿಲ್ಲಿಸಲು ನಿತ್ಯ ಸಮಸ್ಯೆಯಾಗುತ್ತಿದೆ. ಮುತುವರ್ಜಿ ವಹಿಸಲಿ
ಗಂಗೊಳ್ಳಿ ಮೀನುಗಾರರ ಬಹುನಿರೀಕ್ಷಿತ ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿ ಪುನರಾರಂಭಿಸಲು ಸಂಬಂಧಪಟ್ಟ ಇಲಾಖಾಧಿಕಾರಿಗಳು ಕ್ರಮಕೈಗೊಳ್ಳಬೇಕಿದೆ. ಕಾಮಗಾರಿ ಪುನರಾರಂಭಿಸಲು ಸರಕಾರದ ಮಟ್ಟದಲ್ಲಿ ಇರುವ ಅಡೆತಡೆ ನಿವಾರಿಸಲು ಈ ಭಾಗದ ಜನಪ್ರತಿನಿಧಿಗಳು ಪ್ರಯತ್ನಿಸಬೇಕಿದೆ. ವಾರದೊಳಗೆ ಕಾಮಗಾರಿ
ಜೆಟ್ಟಿ ಪುನರ್ ನಿರ್ಮಾಣ ಕಾರ್ಯ ಸ್ಥಗಿತಗೊಂಡಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಈ ಸಂಬಂಧ ಈಗಾಗಲೇ ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಲಾಗಿದೆ. ಇದರ ಯಂತ್ರೋಪಕರಣ ಕೆಟ್ಟು ಹೋಗಿರು ವುದರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಗುತ್ತಿಗೆದಾರರಿಗೆ ಹಣ ಪಾವತಿಸಲಾಗಿದೆ. ಒಂದು ವಾರದೊಳಗೆ ಕಾಮಗಾರಿ ಪುನರಾರಂಭಗೊಳ್ಳಲಿದೆ.
-ಉದಯ ಕುಮಾರ್,
ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಬಂದರು ಮತ್ತು ಮೀನುಗಾರಿಕೆ ಇಲಾಖೆ, ಉಡುಪಿ