Advertisement
ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರ ನ್ಯಾಯಾಲಯದಲ್ಲಿ ತಗಾದೆ ಅರ್ಜಿ ಹಾಕಿದ ಕಾರಣ ವಿಳಂಬವಾಗಿದೆ. ಇದೀಗ ಪ್ರಕರಣ ಇತ್ಯರ್ಥವಾಗಿದೆ. ಆಕ್ಷೇಪ ವ್ಯಕ್ತಪಡಿಸಿದವರಿಗೆ ಟೆಂಡರ್ ದೊರೆಯಲಿಲ್ಲ.
Related Articles
Advertisement
ಕಿರು ಜೆಟ್ಟಿ ಪ್ರದೇಶದಲ್ಲಿ ಕಲ್ಲು ಹಾಗೂ ಹೂಳು ತುಂಬಿರುವುದರಿಂದ ಇದರ ತುರ್ತು ಕಾಮಗಾರಿಗೆ 10 ಲಕ್ಷ ರೂ. ಅನುದಾನ ಬಿಡುಗಡೆ ಕೂಡ ಆಗಿತ್ತು. ಆದರೆ ಆಗ ಜೆಸಿಬಿಯನ್ನು ಒಮ್ಮೆ ನೀರಿಗಿಳಿಸಿ 2 ದಿನ ಕೆಲಸ ಮಾಡಿದ್ದು ಬಿಟ್ಟರೆ ಬೇರೇನೂ ಆಗಿಲ್ಲ ಎನ್ನುವುದು ಸ್ಥಳೀಯರ ಆರೋಪ. ಆದರೆ ಅಧಿಕಾರಿಗಳು ಅದು ಇ- ಟೆಂಡರ್‌ನಲ್ಲಿ ಆದ ಲೋಪ ಎನ್ನುತ್ತಾರೆ. ಇದರಿಂದ ಕಿರುಜೆಟ್ಟಿಯೂ ಮೀನುಗಾರರಿಗೆ ಪ್ರಯೋಜನಕ್ಕಿಲ್ಲವಾಗಿದೆ.
ಸಮಸ್ಯೆ :
ಜೆಟ್ಟಿ ಕುಸಿತವಾಗಿ ಬಳಕೆಗೆ ದೊರಕದ ಕಾರಣ ಮೀನುಗಾರರಿಗೆ ಬೋಟ್, ದೋಣಿಗಳನ್ನು ನಿಲ್ಲಿಸಲು ನಿತ್ಯ ಸಮಸ್ಯೆಯಾಗುತ್ತಿದೆ. ಗಂಗೊಳ್ಳಿ ಬಂದರಿನಲ್ಲಿ 300ಕ್ಕೂ ಅಧಿಕ ಪಸೀìನ್ ಬೋಟುಗಳು, 600ಕ್ಕೂ ಮಿಕ್ಕಿ ಮೀನುಗಾರಿಕಾ ಬೋಟು ಹಾಗೂ 500ಕ್ಕೂ ಅಧಿಕ ನಾಡ ದೋಣಿಗಳಿವೆ. ಎರಡು ವರ್ಷಗಳ ಹಿಂದೆ ಇಲ್ಲಿನ ಬಂದರಿನ ಜೆಟ್ಟಿಯ ಸ್ಲ್ಯಾಬ್ ಕುಸಿದಿತ್ತು. ಆ ಕಾರಣಕ್ಕೆ ಇಡೀ ಕಟ್ಟಡವೇ ಕುಸಿಯುವ ಭೀತಿಯಿಂದ ಎರಡನೇ ಹರಾಜು ಪ್ರಾಂಗಣದ ವಠಾರದಲ್ಲಿ ಮೀನುಗಾರಿಕೆ ಚಟುವಟಿಕೆ ನಿರ್ಬಂಧಿಸಲಾಗಿದೆ. ಇದರಿಂದ ಈಗ ಬಂದರಿನಲ್ಲಿ ಬೋಟುಗಳನ್ನು ನಿಲ್ಲಿಸಲು ಸಮಸ್ಯೆಯಾಗುತ್ತಿದೆ. ಈ ಕಾರಣಕ್ಕೆ ಜೆಟ್ಟಿಯ ವಿಸ್ತರಣೆ ಅಥವಾ ಪುನರ್ ನಿರ್ಮಾಣ ಈಗಿನ ತುರ್ತು ಅಗತ್ಯವಾಗಿದೆ.
ಬಳಕೆಯಾಗಲಿಲ್ಲ :
ಈಗ ಬಿರುಸಿನ ಮೀನುಗಾರಿಕೆ ನಡೆ ಯುತ್ತಿಲ್ಲವಾದ್ದರಿಂದ ಬಂದರಿನಲ್ಲಿ ಬೋಟ್‌ಗಳು ಹಾಗೂ ದೋಣಿಗಳ ಒತ್ತಡ ಅಷ್ಟೇನೂ ಇಲ್ಲ. ಆದರೆ ಒಂದು ವೇಳೆ ಈ ಸಮಯದಲ್ಲಿ ಉತ್ತಮ ಮೀನು ಗಾರಿಕೆ ನಡೆಯುತ್ತಿದ್ದರೆ ಕುಸಿದ ಜೆಟ್ಟಿ ದುರಸ್ತಿಯಾಗುವವರೆಗೆ ಮೀನುಗಾರಿಕೆಗೆ ತೊಂದರೆಯಾಗದಂತೆ ಬಂದರಿನ ಉತ್ತರ ದಿಕ್ಕಿನಲ್ಲಿ ನಿರುಪಯುಕ್ತ ವಾಗಿರುವ ಕಿರು ಜೆಟ್ಟಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಹೇಳಿದ್ದರೂ ಅಂತಹ ಪರಿಸ್ಥಿತಿಯೇ ಬರಲಿಲ್ಲ.
ಟೆಂಡರ್ ಆಗಿದೆ ಎನ್ನುವ ಮಾಹಿತಿ ಇದ್ದು ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಕಳೆದ ಅನೇಕ ವರ್ಷಗಳ ಬೇಡಿಕೆ ಇದಾಗಿದ್ದು ನಮಗೆ ಇಲ್ಲಿ ಬೋಟ್‌ಗಳನ್ನು ನಿಲ್ಲಿಸಲು ಜಾಗದ ಕೊರತೆಯಾಗುವುದರಿಂದ ತತ್‌ಕ್ಷಣ ಕಾಮಗಾರಿ ಆರಂಭಿಸಬೇಕು. –ರಾಮಪ್ಪ ಖಾರ್ವಿ ಮೀನುಗಾರರು, ಗಂಗೊಳ್ಳಿ
ನಾನು ಹಾಗೂ ಸಂಸದರು ಗಂಗೊಳ್ಳಿ ಬಂದರಿನ ಜೆಟ್ಟಿ ಪುನರ್ ನಿರ್ಮಾಣಕ್ಕೆ 12 ಕೋ.ರೂ. ಗೆ ಬೇಡಿಕೆ ಇಟ್ಟಂತೆ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ. ಟೆಂಡರ್ ಕುರಿತಂತೆ ಇದ್ದ ಅಡೆತಡೆ ನಿವಾರಣೆಯಾಗಿದೆ. ಎರಡು ವಾರದಲ್ಲಿ ಕಾಮಗಾರಿ ಆರಂಭಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು.–ಬಿ.ಎಂ. ಸುಕುಮಾರ್ ಶೆಟ್ಟಿ, ಶಾಸಕರು, ಬೈಂದೂರು