Advertisement

ನನೆಗುದಿಗೆ ಗಂಗೊಳ್ಳಿ ಮುಖ್ಯ ರಸ್ತೆ ಕಾಮಗಾರಿ

11:19 PM May 28, 2020 | Sriram |

ಗಂಗೊಳ್ಳಿ: ಇಲ್ಲಿನ ಮೀನುಗಾರಿಕೆ ಬಂದರನ್ನು ಸಂಪರ್ಕಿ ಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಇದರ ದುರಸ್ತಿಗೆ ಅನುದಾನ ಘೋಷಣೆಯಾಗಿ 4 5 ತಿಂಗಳುಗಳು ಕಳೆದಿವೆ. ಇನ್ನೂ ಇದರ ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಈಗ ಮಳೆಗಾಲ ಆರಂಭವಾದರೆ ಮತ್ತೆ ಈ ರಸ್ತೆಯ ಸಂಚಾರ ಶೋಚನೀಯವಾಗುತ್ತದೆ.

Advertisement

ಗಂಗೊಳ್ಳಿ ಮುಖ್ಯ ರಸ್ತೆಯ 1 ಕಿ.ಮೀ. ವರೆಗಿನ ಕಾಂಕ್ರೀಟೀಕರಣಕ್ಕೆ ಲೋಕೋ ಪಯೋಗಿ ಇಲಾಖೆಯಿಂದ 1.5 ಕೋ.ರೂ. ಅನುದಾನ ಮಂಜೂರಾಗಿತ್ತು. ಕಳೆದ ವರ್ಷ ಮುಖ್ಯ ರಸ್ತೆಯ 700 ಮೀ. ಕಾಂಕ್ರೀಟ್‌ ಕಾಮಗಾರಿ ಆಗಿದ್ದು, ಈ ಸಾಲಿನಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರ ಮುತುವರ್ಜಿಯಲ್ಲಿ ಸುಮಾರು ಒಂದು ಕಿ.ಮೀ. ಉದ್ದ ರಸ್ತೆಯ ಕಾಂಕ್ರೀಟೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 1.5 ಕೋಟಿ ರೂ. ಅನುದಾನ ಮಂಜೂರಾಗಿತ್ತು. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರನ್ನು ನಿಗದಿಪಡಿಸಿದ್ದರೂ ಕಾಮಗಾರಿ ಆರಂಭಕ್ಕೆ ಮಾತ್ರ ಮೀನಮೇಷ ಎಣಿಸಲಾಗುತ್ತಿದೆ.

ಯಾವಾಗ ಆರಂಭ?
ಈ ಮೊದಲು ಮಾರ್ಚ್‌ ಅಂತ್ಯಕ್ಕೆ ಕಾಮಗಾರಿ ಆರಂಭಿಸುವ ಭರವಸೆ ಯಿತ್ತು. ಆದರೆ ಕೋವಿಡ್‌-19 ಲಾಕ್‌ಡೌನ್‌ನಿಂದಾಗಿ ಕಾಮಗಾರಿ ಆರಂಭ ಮತ್ತಷ್ಟು ವಿಳಂಬವಾಗಿದೆ. ಲಾಕ್‌ಡೌನ್‌ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸರಕಾರ ರಸ್ತೆ ಕಾಮಗಾರಿ ನಿರ್ವಹಿಸಲು ಅನುಮತಿ ನೀಡಿದ್ದು, ಗಂಗೊಳ್ಳಿ ಮುಖ್ಯ ರಸ್ತೆಯ ಸುಮಾರು 1.5 ಕೋಟಿ ರೂ. ವೆಚ್ಚದ 1 ಕಿ. ಮೀ. ವರೆಗಿನ ರಸ್ತೆ ಕಾಂಕ್ರೀಟ್‌ ಕಾಮಗಾರಿಯನ್ನು ಯಾವಾಗ ಆರಂಭಿಸುತ್ತಾರೆ ಎನ್ನುವುದು ನಾಗರಿಕರ ಪ್ರಶ್ನೆಯಾಗಿದೆ.

ಕುಂದಾಪುರ ಹಾಗೂ ತ್ರಾಸಿ ಕಡೆಯಿಂದ ಗಂಗೊಳ್ಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆಯ ಅನೇಕ ಕಡೆಗಳಲ್ಲಿ ಮಳೆಯಿಂ ದಾಗಿ ಹೊಂಡ   ಗುಂಡಿಗಳು ಬಿದ್ದಿದ್ದು, ಕೆಲವೆಡೆಗಳಲ್ಲಿ ತೇಪೆ ಹಾಕಲಾಗಿದೆ. ಆದರೆ ಕಾಂಕ್ರೀಟೀಕರಣ ಮಂಜೂರಾಗಿರುವ ರಸ್ತೆಯ ಭಾಗಕ್ಕೆ ತೇಪೆ ಹಾಕದೆ ಹಾಗೆಯೇ ಬಿಟ್ಟಿರುವುದರಿಂದ ರಸ್ತೆಯ ಎಲ್ಲೆಡೆ ಹೊಂಡಗುಂಡಿಗಳು ನಿರ್ಮಾಣವಾಗಿವೆ. ಇನ್ನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ರಸ್ತೆ ಸಂಪೂರ್ಣ ವಾಗಿ ಹದಗೆಡುವ ಸಾಧ್ಯತೆಯಿದೆ.

ಚರಂಡಿಗೆ ಬೇಡಿಕೆ
ಗಂಗೊಳ್ಳಿಯಿಂದ ತ್ರಾಸಿಯವರೆಗಿನ ಮುಖ್ಯ ರಸ್ತೆಯುದ್ದಕ್ಕೂ ಅನೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ವರ್ಷ ರಸ್ತೆಯಲ್ಲಿಯೇ ಮಳೆ ನೀರು ಹರಿದು ಹೋಗುತ್ತಿದೆ. ಈ ಬಾರಿಯ ಕಾಂಕ್ರೀಟ್‌ ಕಾಮಗಾರಿಯೊಂದಿಗೆ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿಯನ್ನು ನಿರ್ಮಾಣ ಮಾಡಲಿ ಎನ್ನುವುದು ಸ್ಥಳೀಯರ ಬೇಡಿಕೆಯಾಗಿದೆ.

Advertisement

ವಾಣಿಜ್ಯ ಚಟುವಟಿಕೆಗೂ ಅಡ್ಡಿ
ಈ ಮುಖ್ಯ ರಸ್ತೆಯು ಕುಂದಾಪುರ, ತ್ರಾಸಿ ಕಡೆಯಿಂದ ಗಂಗೊಳ್ಳಿಯ ಮೀನುಗಾರಿಕೆ ಬಂದರಿಗೆ ತೆರಳುವ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಇಲ್ಲಿನ ಬಂದರಿನಿಂದ ಬೇರೆ ಬೇರೆ ಕಡೆಗಳಿಗೆ ಮೀನು ಸಾಗಾಟ ಮಾಡಲಾಗುತ್ತದೆ. ಮೀನು ಸಾಗಾಟದ ಲಾರಿಗಳು, ಐಸ್‌ ಸಾಗಾಟದ ವಾಹನ, ಮೀನುಗಾರಿಕೆ ಸಲಕರಣೆ ಸಾಗಿಸುವ ವಾಹನಗಳು, ಪ್ರತಿದಿನ ಹತ್ತಾರು ಸರಕಾರಿ ಹಾಗೂ ಖಾಸಗಿ ಬಸ್‌ಗಳು, ಶಾಲಾ ವಾಹನಗಳು, ಕಾರು, ಆಟೋರಿಕ್ಷಾ ಸಹಿತ ಸಾವಿರಾರು ವಾಹನಗಳು ಪ್ರತಿನಿತ್ಯ ಇದೇ ಮಾರ್ಗವಾಗಿ ಸಂಚರಿಸುತ್ತವೆ. ಈ ಹೊಂಡ   ಗುಂಡಿಗಳ ರಸ್ತೆಯಿಂದಾಗಿ ಮೀನು ಗಾರಿಕೆ ಸೇರಿದಂತೆ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳಿಗೂ ಅಡ್ಡಿಯಾಗುತ್ತಿದೆ.

ಲಾಕ್‌ಡೌನ್‌ನಿಂದ ವಿಳಂಬ
ಗಂಗೊಳ್ಳಿಯ ಮುಖ್ಯ ರಸ್ತೆಯ ಕಾಂಕ್ರೀಟಿಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 1.5 ಕೋ.ರೂ. ಅನುದಾನ ಮಂಜೂರಾಗಿದೆ. ಟೆಂಡರ್‌ ಕೂಡ ಪೂರ್ಣಗೊಂಡಿತ್ತು. ಆದರೆ ಲಾಕ್‌ಡೌನ್‌ನಿಂದಾಗಿ ಕಾಮಗಾರಿ ಪ್ರಾರಂಭಿಸಲು ವಿಳಂಬವಾಗಿದೆ. ಇನ್ನು ಮಳೆಗಾಲ ಕೂಡ ಆರಂಭವಾಗುವುದರಿಂದ ಕಾಮಗಾರಿ ಕಷ್ಟ. ಮಳೆಗಾಲ ಮುಗಿದ ತತ್‌ಕ್ಷಣ ಆರಂಭಿಸಲು ಸೂಚನೆ ನೀಡಲಾಗುವುದು.
 ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

Advertisement

Udayavani is now on Telegram. Click here to join our channel and stay updated with the latest news.

Next