Advertisement

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

12:15 AM Jan 09, 2025 | Team Udayavani |

ಗಂಗೊಳ್ಳಿ: ಗಂಗೊಳ್ಳಿ ಸಮೀಪದ ಸಮುದ್ರದಲ್ಲಿ ಸರ್ವಮಂಗಳ ಬೋಟಿನಲ್ಲಿ ಜ. 2ರಂದು ಸಂಜೆ ಮೀನುಗಾರಿಕೆಯಲ್ಲಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕಡಲಿಗೆ ಬಿದ್ದು ನಾಪತ್ತೆಯಾದ ನಾರಾಯಣ ಮೊಗವೀರ (58) ಅವರ ಬಗ್ಗೆ 6 ದಿನ ಕಳೆದರೂ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ.

Advertisement

ಆ ದಿನ ಇತರ ಮೀನುಗಾರರು ಬೋಟ್‌ಗಳಲ್ಲಿ ಹುಡುಕಾಡಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಕಳೆದ 5-6 ದಿನಗಳಿಂದಲೂ ಅವರ ಪತ್ತೆಗಾಗಿ ಗಂಗೊಳ್ಳಿಯ ಪರ್ಶಿನ್‌ ಬೋಟ್‌ಗಳು, ಮನೆಯವರು, ಕರಾವಳಿ ಕಾವಲು ಪಡೆ ಪೊಲೀಸರು, ಗಂಗೊಳ್ಳಿ ಠಾಣಾ ಪೊಲೀಸರು, ಮುಳುಗು ತಜ್ಞ ದಿನೇಶ್‌ ಖಾರ್ವಿ ಮತ್ತು ಇತರರು ನಿರಂತರ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಇವರ ಬಗ್ಗೆ ಏನಾದರೂ ಸುಳಿವು ಸಿಕ್ಕಿದರೆ ತತ್‌ಕ್ಷಣ ಗಂಗೊಳ್ಳಿ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರಿಗೆ ಮಾಹಿತಿ ನೀಡಬೇಕಾಗಿ ಮನೆಯವರು ಮನವಿ ಮಾಡಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next