Advertisement

ಗಂಗೊಳ್ಳಿ: ಜೆಟ್ಟಿ ಕುಸಿತ; ಸಾರ್ವಜನಿಕರ ಆಕ್ರೋಶ

02:53 PM Sep 30, 2022 | Team Udayavani |

ಗಂಗೊಳ್ಳಿ: ಇಲ್ಲಿನ ಬಂದರು ಜೆಟ್ಟಿ ಕಾಮಗಾರಿಯಲ್ಲಿ ಗುತ್ತಿಗೆದಾರ ಬಿಜೆಪಿ ಸರಕಾರಕ್ಕೆ ಕೊಟ್ಟ ಕಮಿಷನ್‌ ಎಷ್ಟು ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Advertisement

ಸಿದ್ದರಾಮಯ್ಯ ಟ್ವೀಟ್‌

ಬುಧವಾರ ಸಂಜೆ ಗಂಗೊಳ್ಳಿಯಲ್ಲಿ ಜೆಟ್ಟಿ ಕುಸಿತ ಉಂಟಾಗಿ ಲಕ್ಷಾಂತರ ರೂ. ನಷ್ಟ ವಾಗಿತ್ತು. ಕಳಪೆ ಕಾಮಗಾರಿ ಕುರಿತು ಸಾರ್ವ ಜನಿಕರು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಗುರುವಾರ ಟ್ವೀಟ್‌ ಮಾಡಿದ ಸಿದ್ದರಾಮಯ್ಯ ಅವರು, “ರಾಜ್ಯದ 40 ಶೇ. ಕಮಿಷನ್‌ ಸರಕಾರ ಇಂದು ಕುಂದಾಪುರ ತಾಲೂಕಿನ ಗಂಗೊಳ್ಳಿ ಬಂದರಿನಲ್ಲಿ ಮುಳುಗಿದೆ’.

“12 ಕೋ. ರೂ. ವೆಚ್ಚದ ಜಟ್ಟಿ ನಿರ್ಮಾಣ ಹಂತದಲ್ಲೇ ನೀರಿನ ಪಾಲಾಗಿದೆ. ಈ ಕಾಮಗಾರಿಯಲ್ಲಿ ಗುತ್ತಿಗೆದಾರ ಬಿಜೆಪಿಗೆ ನೀಡಿದ್ದ ಕಮಿಷನ್‌ ಎಷ್ಟು? ಎನ್ನುವ ಬಗ್ಗೆ ತನಿಖೆಯಾಗಲಿ. ಸಚಿವ ಅಂಗಾರ, ಸಚಿವ ಕೋಟ ಅವರನ್ನು ಟ್ಯಾಗ್‌ ಮಾಡಿ ಬರೆದಿದ್ದಾರೆ.

ಅವೈಜ್ಞಾನಿಕ ಕಾಮಗಾರಿ

Advertisement

12.8 ಕೋ.ರೂ. ವೆಚ್ಚದ ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿನ ಜೆಟ್ಟಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಕುಸಿದಿದೆ.

150 ಮೀ.ಗೂ ಅಧಿಕ ಜೆಟ್ಟಿ ಕುಸಿದಿದ್ದು ಮೀನುಗಾರರು ತೀವ್ರ ಆತಂಕಕ್ಕೀಡಾಗಿದ್ದಾರೆ. ಘಟನೆ ನಡೆದು ನಿರಂತರವಾಗಿ ಕುಸಿತವಾಗುತ್ತಿದ್ದರೂ ಕೂಡ ಸಂಬಂಧಪಟ್ಟವರು ಯಾರೂ ಇತ್ತ ಕಡೆ ತಲೆ ಹಾಕಿಲ್ಲ ಎಂಬ ಆರೋಪ ಕೇಳಿಬಂದಿದೆ.

ನೂತನ ಜೆಟ್ಟಿ ಕಾಮಗಾರಿಗಾಗಿ ಹಳೆ ಜೆಟ್ಟಿಯ ಡಯಫ್ರಾಮ್‌ ವಾಲ್‌ ನಡುವೆ ಇದ್ದ ರಾಡ್‌ ತುಂಡರಿಸಿ ಹೊಸ ಪಿಲ್ಲರ್‌ ಹಾಕಿದ್ದು ಎರಡಕ್ಕೂ ಕೊಂಡಿಯಾಗಿದ್ದ ರಾಡ್‌ ತುಂಡರಿಸಿ ಅವೈಜ್ಞಾನಿಕ ಕಾಮಗಾರಿ ಮಾಡಿದ್ದರಿಂದ ಹಳೆ ಜೆಟ್ಟಿ ಕುಸಿತಕ್ಕೊಳಗಾಗಿ ಈಗ ನಡೆಯುತ್ತಿರುವ ಕಾಮಗಾರಿಗಾಗಿ ಮಾಡಿದ ಪಿಲ್ಲರ್‌ ಮೇಲೆ ಬಿದ್ದು ಹಲವು ಪಿಲ್ಲರ್‌ ಕುಸಿದಿದೆ ಎನ್ನುತ್ತಾರೆ ಮೀನುಗಾರರು.

ಅಧಿಕಾರಿಗಳ ಬೇಜವಾಬ್ದಾರಿ

ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಗುತ್ತಿಗೆದಾರರ ನಿರ್ಲಕ್ಷ Â ಇದು ಎಂದು ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಒಟ್ಟು 379 ಮೀ. ಉದ್ದದ ಜೆಟ್ಟಿ ನಿರ್ಮಾಣವಾಗಬೇಕಿದೆ. ಗಂಗೊಳ್ಳಿಯಲ್ಲಿ 50 ಪರ್ಸಿನ್‌ ಬೋಟ್‌, 150 ನಾಡದೋಣಿಗಳು, 250 ಟ್ರಾಲ್‌ಬೋಟ್‌, 100 ರಷ್ಟು 370 ಬೋಟ್‌ಗಳು, 100ಕ್ಕಿಂತ ಹೆಚ್ಚು ಕಂಟ್ಲಿ ದೋಣಿಗಳು ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಮೀನು ಖಾಲಿ ಮಾಡಲು ದೂರದ ಭಟ್ಕಳ ಮೊದಲಾದೆಡೆ ತೆರಳಬೇಕಾದ ಅನಿವಾರ್ಯ ಮೀನುಗಾರರದ್ದು. ಮೀನು ಕಾರ್ಮಿಕರು ಅತಂತ್ರರಾಗಿದ್ದಾರೆ.

ಎಚ್ಚರಿಕೆ

ಹೀಗೆ ಮುಂದುವರಿದರೆ ಇನ್ನು ಒಂದೆರಡು ವರ್ಷ ಅತಂತ್ರತೆ ಜತೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ನಿಶ್ಚಿತ ಎನ್ನುತ್ತಾರೆ ಮೀನುಗಾರರು. ಮೀನುಗಾರರ ಜೀವ-ಜೀವನದ ಜೊತೆ ಚೆಲ್ಲಾಟವಾಡಲಾಗುತ್ತಿದೆ. ಈ ಸಮಸ್ಯೆಗೆ ಶೀಘ್ರ ಪರಿಹಾರವೊದಗಿಸಿ ಮೀನುಗಾರರು ಬದುಕು ಕಟ್ಟಿಕೊಳ್ಳಲು ಕ್ರಮಕೈಗೊಳ್ಳದಿದ್ದಲ್ಲಿ ಹೋರಾಟ ನಿಶ್ಚಿತ ಎಂದು ಗಂಗೊಳ್ಳಿಯ ಹಸಿ ಮೀನು ವ್ಯಾಪಾರಸ್ಥರ ಸಂಘದವರು ಎಚ್ಚರಿಕೆ ನೀಡಿದ್ದಾರೆ.

ಭೇಟಿ

ಮಾಜಿ ಶಾಸಕ ಗೋಪಾಲ ಪೂಜಾರಿ ಅವರು ಭೇಟಿ ನೀಡಿ ಕಳಪೆ ಕಾಮಗಾರಿ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next