Advertisement

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

04:51 PM Jan 03, 2025 | Team Udayavani |

ಗಂಗೊಳ್ಳಿ: ಸರಕಾರಿ ಕಟ್ಟಡಗಳನ್ನು ತಮ್ಮ ರಾಜಕೀಯ ಲಾಭಗೋಸ್ಕರ ಯಾವುದೇ ಸೆ„ದ್ಧಾಂತಿಕ ಬದ್ಧತೆ ಇಲ್ಲದ ಕಾಂಗ್ರೆಸ್‌ ಪಕ್ಷ ಕಾನೂನುಬಾಹಿರವಾದ ಎಲ್ಲಾ ಚಟುವಟಿಕೆಗಳಿಗೆ ಅನುವು ಮಾಡಿಕೊಡಲು ಆರಂಭಿಸಿದ್ದನ್ನು ವಿರೋಧಿಸುತ್ತೇವೆ. ಕಾಂಗ್ರೆಸ್‌ ಒಂದು ಕಡೆ ಎಸ್‌ಡಿಪಿಐಯನ್ನು ನಿಷೇಧಿಸಬೇಕು, ಎಸ್‌ಡಿಪಿಐ ಸಮಾಜಘಾತುಕ ಶಕ್ತಿ, ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದೆ ಅನ್ನುವುದನ್ನು ದೇಶಾದ್ಯಂತ ಹೇಳುತ್ತಿದೆ. ಆದರೆ ಅಧಿಕಾರಕ್ಕೋಸ್ಕರ, ಪಂಚಾಯತ್‌ ಆಡಳಿತಕ್ಕೋಸ್ಕರ ಅದರ ಜತೆ ಅನೈತಿಕ ಸಂಬಂಧ ಮಾಡಿಕೊಳ್ಳುತ್ತದೆ. ಸೈದ್ಧಾಂತಿಕತೆ ಮಾರಾಟ ಮಾಡಿ, ಅಧಿಕಾರ ಮಾತ್ರ ಮುಖ್ಯ ಎಂದು ಕಾಂಗ್ರೆಸ್‌ ತೋರಿಸಿಕೊಟ್ಟಿದೆ ಎಂದು ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಹೇಳಿದರು.

Advertisement

ಅವರು ಶುಕ್ರವಾರ ಹಿಂದೂ ಹಿತರಕ್ಷಣಾ ಸಮಿತಿ ಗಂಗೊಳ್ಳಿ ಇದರ ವತಿಯಿಂದ, ಗಂಗೊಳ್ಳಿ ಗ್ರಾಮ ಪಂಚಾಯತ್‌ ಕಚೇರಿಯ ಒಳಗೆ ಪಂಚಾಯತ್‌ ಉಪಾಧ್ಯಕ್ಷ ಅಧಿಕಾರ ಸ್ವೀಕಾರ ಮಾಡುವ ಸಂದರ್ಭ ಮೌಲ್ವಿಗಳ ಮೂಲಕ ನಮಾಜ್‌ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್‌ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಬೈಂದೂರು ಕ್ಷೇತ್ರದಲ್ಲಿ ಕಳೆದ ಒಂದೂವರೆ ವರ್ಷದಿಂದ ಗೋ ಕಳ್ಳತನ ಪ್ರಕರಣಗಳು ತುಂಬಾ ದಾಖಲಾಗುತ್ತಿದೆ. ಪರೋಕ್ಷವಾಗಿ ಇದರ ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದಿರುವ ವಿಚಾರ. ಇಂತಹ ಎಸ್‌ಡಿಪಿಐಗೆ ರೆಡ್‌ ಕಾರ್ಪೆಟ್ ಹಾಕಿ ಸ್ವಾಗತ ಮಾಡಿಕೊಂಡು ಅವರ ಜತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್‌ ಗಂಗೊಳ್ಳಿ ಗ್ರಾ.ಪಂ. ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಅಧಿಕಾರಕ್ಕೋಸ್ಕರ ತುಷ್ಟೀಕರಣ ಮಾಡುವುದನ್ನು ಸಮಾಜ ಸಹಿಸುವುದಿಲ್ಲ ಎಂದರು.

ಮನವಿಯನ್ನು ಕುಂದಾಪುರ ತಹಶೀಲ್ದಾರ್‌ ಮಲ್ಲಿಕಾರ್ಜುನ್‌ ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ| ರವಿ ಕುಮಾರ್‌ ಹುಕ್ಕೇರಿ ಅವರಿಗೆ ಸಲ್ಲಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.

ಗಂಗೊಳ್ಳಿ ಗ್ರಾ.ಪಂ. ಪಿಡಿಒ ಉಮಾಶಂಕರ, ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ, ಬೈಂದೂರು ಪೊಲೀಸ್‌ ವೃತ್ತ ನಿರೀಕ್ಷಕ ಸವಿತೃತೇಜ, ಗಂಗೊಳ್ಳಿ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಹರೀಶ್‌ ಆರ್‌. ಉಪಸ್ಥಿತರಿದ್ದರು.

Advertisement

ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ ಕುಮಾರ್‌ ಶೆಟ್ಟಿ, ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವೀಂದ್ರ ಖಾರ್ವಿ, ತಾ.ಪಂ. ಮಾಜಿ ಸದಸ್ಯ ಸುರೇಂದ್ರ ಖಾರ್ವಿ, ಉಮಾನಾಥ ದೇವಾಡಿಗ, ವಾಸುದೇವ ದೇವಾಡಿಗ, ಶ್ರೀಧರ ನಾಯ್ಕ, ಗಂಗೊಳ್ಳಿ ಗ್ರಾ.ಪಂ. ಸದಸ್ಯರು, ತ್ರಾಸಿ ಗ್ರಾ.ಪಂ. ಅಧ್ಯಕ್ಷ ಮಿಥುನ್‌ ಎಂ.ಡಿ.ಬಿಜೂರು, ಗುಜ್ಜಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ ಮೇಸ್ತ, ಚಂದ್ರ ಪಂಚವಟಿ, ರಾಘವೇಂದ್ರ ಗಾಣಿಗ, ಪ್ರೇಮಾ ಪೂಜಾರಿ, ಶಾಂತಿ ಖಾರ್ವಿ, ರಘುನಾಥ ಖಾರ್ವಿ, ನವೀನ ಗಂಗೊಳ್ಳಿ, ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next