Advertisement
ನಾಗರತ್ನಾ ಅವರಿಗೆ 4 ವರ್ಷದ ಹಿಂದೆ ಮದುವೆಯಾಗಿದ್ದು, ಇತ್ತೀಚೆಗೆ ಗರ್ಭಿಣಿಯಾಗಿ ಜ. 30ರಂದು ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕುಂದಾಪುರದ ಖಾಸಗಿ ನರ್ಸಿಂಗ್ ಹೋಮ್‌ಗೆ ದಾಖಲಿಸಲಾಗಿದೆ. ಮಧ್ಯಾಹ್ನ 12.10ಕ್ಕೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳ ಸೂಚನೆಯಂತೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಸಂಜೆ 4.45ಕ್ಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ನಾಗರತ್ನಾ ಅವರ ಸಹೋದರ ಶೈಲೇಶ್ ಗಂಗೊಳ್ಳಿ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Gangolli: ತೀವ್ರ ರಕ್ತಸ್ರಾವ: ಬಾಣಂತಿ ಸಾವು
12:47 AM Feb 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.