ಹೊಸದಿಲ್ಲಿ: ಗಾಯಕ-ರಾಜಕಾರಣಿ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ನನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಭಾರತದ ಗುಪ್ತಚರ ಸಂಸ್ಥೆಗಳ ಮೂಲಗಳ ಪ್ರಕಾರ, ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯ ಜವಾಬ್ದಾರಿಯನ್ನು ಹೊತ್ತಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ನನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ.
ಭಾರತದ ಗುಪ್ತಚರ ಸಂಸ್ಥೆಗಳು ಅಂತಾರಾಷ್ಟ್ರೀಯ ಮೂಲಗಳಿಂದ ಪ್ರಮುಖ ಮಾಹಿತಿ ಪಡೆದಿವೆ. ಆದರೆ, ಇದುವರೆಗೆ ಈ ವಿಷಯದಲ್ಲಿ ಕ್ಯಾಲಿಫೋರ್ನಿಯಾ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಆದರೆ ಗುಪ್ತಚರ ಇಲಾಖೆಗಳಾದ ರಾ, ಇಂಟಲಿಜೆನ್ಸ್ ಬ್ಯೂರೋ, ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಮತ್ತು ಪಂಜಾಬ್ ಗುಪ್ತಚರ ತಂಡ ಈ ಬಗ್ಗೆ ಮಾಹಿತಿ ಪಡೆದಿದೆ ಎಂದು ವರದಿ ತಿಳಿಸಿದೆ.
ಕೆನಡಾದಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ತಂಡದ ಸದಸ್ಯನಾಗಿರುವ ಗೋಲ್ಡಿ ಬ್ರಾರ್ ಈ ಹಿಂದೆ ಕೆನಡಾದಲ್ಲೇ ನೆಲೆಸಿದ್ದ. ಇತ್ತೀಚೆಗೆ ಅಮೆರಿಕಾಗೆ ತೆರಳಿ ಅಲ್ಲಿ ನೆಲೆಸಿದ್ದ.