Advertisement

ಉಡುಪಿ: ಗಾಂಜಾ ಪ್ರಕರಣ; ಆರೋಪಿಗೆ 3 ವರ್ಷ ಕಠಿನ ಕಾರಾಗೃಹ ಶಿಕ್ಷೆ

07:44 PM Oct 01, 2022 | Team Udayavani |

ಉಡುಪಿ: ಗಾಂಜಾ ಪ್ರಕರಣದ ಆರೋಪಿ ಮಹಾರಾಷ್ಟ್ರದ ಅವಿನಾಶ್‌ ದಿಗಂಬರ್‌ ಲೋಖಂಡೆ(28)ಗೆ 3 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ.ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಾಂತವೀರ ಶಿವಪ್ಪ ಅವರು ಆದೇಶಿಸಿದ್ದಾರೆ. ಸರಕಾರಿ ಅಭಿಯೋಜಕಿ ಶಾಂತಿಬಾಯಿ ಅವರು ವಾದ ಮಂಡಿಸಿದ್ದಾರೆ.

Advertisement

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ನಿಶಾ ಜೇಮ್ಸ್‌ ಅವರ ನಿರ್ದೇಶನದಲ್ಲಿ ಅಂದಿನ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರ ಚಂದ್ರ ಅವರ ಮಾರ್ಗದರ್ಶನದಲ್ಲಿ 2019ರ ಜು.24ರಂದು ಅಂದಿನ ಸೆನ್‌ ಅಪರಾಧ ಪೊಲೀಸ್‌ ಠಾಣೆಯ ನಿರೀಕ್ಷಕ ಸೀತಾರಾಮ ಅವರು ಇಂದ್ರಾಳಿ ರೈಲ್ವೇ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾರಾಟ ಮಾಡಲು ಗಾಂಜಾ ತಂದಿದ್ದ ಆರೋಪಿಯನ್ನು ಬಂಧಿಸಿದ್ದರು. ಈತ ಸುಮಾರು 40 ಸಾವಿರ ರೂ.ಮೌಲ್ಯದ 2 ಕಿಲೋ 20 ಗ್ರಾಂ ತೂಕದ ಗಾಂಜಾವನ್ನು ಮತ್ತು 5 ಸಾವಿರ ರೂ.ಮೌಲ್ಯದ ಮೊಬೈಲ್‌ ಹ್ಯಾಂಡ್‌ಸೆಟ್‌ ಸಹಿತ ಒಟ್ಟು 45 ಸಾವಿರ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದರು.

ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಮುಂದುವರಿಸಿದ ಸೆನ್‌ ಅಪರಾಧ ಪೊಲೀಸ್‌ ಠಾಣೆಯ ಉಪನಿರೀಕ್ಷಕ ನಾರಾಯಣ ಅವರು 2020ರ ಮಾ.23ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next