Advertisement
ಶುಕ್ರವಾರ ಬೆಳಿಗ್ಗೆ ವಿಜಯಪುರ ಮಹಾನಗರ ಪ್ರದಕ್ಷಿಣೆ ಹಾಕಿದ ಲೋಕಾಯುಕ್ತ ನ್ಯಾಯಮೂರ್ತಿ ಪಾಟೀಲ ಅವರು, ನಗರದಲ್ಲಿ ಕಸ ವಿಲೇವಾರಿ ಸ್ಥಿತಿಗತಿ ಪರಿಶೀಲನೆ ಮಾಡಿದ್ದಾರೆ.
Related Articles
Advertisement
ಕಸ ನಿರ್ವಹಣೆ ಹಾಗೂ ಸಂಸ್ಕರಣೆ ವಿಷಯದ ಯಾವುದೇ ಇಲಾಖೆಯ ಅಧಿಕಾರಿಗಳು ತಪ್ಪು ಮಾಡಿದರೂ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ನಗರ ಹಾಗೂ ಜಿಲ್ಲೆಯಲ್ಲಿನ ಸ್ವಚ್ಛತೆಗೆ ಆದ್ಯತೆ ನೀಡಲು ಕ್ರಮ ತೆಗೆದು ಕೊಳ್ಳಲಾಗುತ್ತದೆ. ಐತಿಹಾಸಿಕ ನಗರವಾದ ವಿಜಯಪುರ ಜಿಲ್ಲೆಗೆ ಪ್ರವಾಸಿಗರು ಭೇಟಿ ನೀಡುವ ಕಾರಣ ನಗರವನ್ನು ಸುಂದರವಾಗಿ ಇಡುವಲ್ಲಿ ಮಹಾನಗರ ಹಾಗೂ ಜಿಲ್ಲೆಯ ಜನತೆ ಜವಾಬ್ದಾರಿ ನಿಭಾಯಿಸಬೇಕು. ಕಸ ನಿರ್ವಹಣೆ ಕುರಿತು ಜನರ ಸಹಭಾಗಿತ್ವ, ಸಹಕಾರ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತರಾಬೇಕು. ಸ್ಮಾರಕಗಳು, ರಸ್ತೆ, ಚರಂಡಿ ಅಂತೆಲ್ಲ ನೋಡದೇ ಎಲ್ಲೆಂದರಲ್ಲಿ ಕಸ ಸುರಿಯುವುದನ್ನು ಜನರೂ ಬಿಡಬೇಕು ಎಂದು ಸೂಚಿಸಿದರು.
ವಿಜಯಪುರ ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗತ್ತಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ , ವಿಜಯಪುರ ತಹಶೀಲ್ದಾರ ಸಿದ್ದರಾಯ ಭೋಸಗಿ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.