Advertisement
ಕೆಯ್ಯೂರು ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಯ್ಯೂರು ಗ್ರಾ.ಪಂ. ವ್ಯಾಪ್ತಿಯ 22 ಎಸ್ಸಿ/ಎಸ್ಟಿ ಕುಟುಂಬಗಳಿಗೆ ಗ್ಯಾಸ್ ಸಂಪರ್ಕ ಕಿಟ್‌ಗಳನ್ನು ವಿತರಿಸಿ ಶಾಸಕರು ಮಾತನಾಡಿದರು.
ಪ್ರತಿ ಗ್ರಾಮವನ್ನು ಹೊಗೆ ಮುಕ್ತ ಗ್ರಾಮವನ್ನಾಗಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಈ ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಈ ಯೋಜನೆಯ ಮೂಲಕ ಬಡತನ ರೇಖೆಗಿಂತ ಕೆಳಗಿನ ಪ್ರತಿ ಮನೆಗೆ ಗ್ಯಾಸ್ ಸಂಪರ್ಕ ಉಚಿತವಾಗಿ ನೀಡಲಾಗುತ್ತಿದೆ. ಹೊಗೆ ಮುಕ್ತ ಗ್ರಾಮವನ್ನಾಗಿಸಲು ನಾವೆಲ್ಲರೂ ಪಣ ತೊಡಬೇಕು ಎಂದು ಶಾಸಕರು ತಿಳಿಸಿದರು. ಕುಂಬ್ರ ಬೂಡಿಯಾರ್ ಇಂಡೇನ್ ಗ್ಯಾಸ್ ಏಜೆನ್ಸಿ ಮ್ಯಾನೇಜರ್ ಪ್ರಭಾಕರ ರೈ ಗ್ಯಾಸ್ ಬಳಕೆಯ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಿದರು. ಕೆಯ್ಯೂರು ಗ್ರಾ.ಪಂ. ಉಪಾಧ್ಯಕ್ಷ ರಾಧಾಕೃಷ್ಣ ಗೌಡ ಕೆಯ್ಯೂರು, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಪ್ರಕಾಶ್ ಆಳ್ವ ಇಳಾಂತಜೆ, ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಸುರೇಶ್ ಆಳ್ವ ಉಪಸಿತರಿದ್ದರು. ಶಿಕ್ಷಕ ಪದ್ಮಯ್ಯ ಸ್ವಾಗತಿಸಿದರು. ಕೆಯ್ಯೂರು ಗ್ರಾ.ಪಂ. ಸದಸ್ಯ ಕಿಟ್ಟ ಅಜಿಲ ಕಣಿಯಾರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಹೊಗೆ ಮುಕ್ತ ಗ್ರಾಮಕ್ಕೆ ಪಣ
ಕೆಯ್ಯೂರು ಗ್ರಾಮವನ್ನು ಹೊಗೆ ಮುಕ್ತ ಗ್ರಾಮವನ್ನಾಗಿಸಲು ನಾವು ಪ್ರಯತ್ನ ಪಡುತ್ತಿದ್ದೇವೆ. ಗ್ರಾಮದಲ್ಲಿ ಬಡತನ ರೇಖೆಗಿಂತ ಕೆಳಗಿನ ಸುಮಾರು 200ಕ್ಕೂ ಅಧಿಕ ಮಂದಿಗೆ ಗ್ಯಾಸ್ ಸಂಪರ್ಕ ಒದಗಿಸಲಾಗಿದೆ. ಇನ್ನು ಕೂಡ ಅರ್ಜಿ ಬಂದಿದ್ದು, ಮುಂದಿನ ದಿನಗಳಲ್ಲಿ ಎಲ್ಲರಿಗೂ ಗ್ಯಾಸ್ ಸಂಪರ್ಕದ ವ್ಯವಸ್ಥೆ ಮಾಡುತ್ತೇವೆ. ಗ್ರಾಮದ ಪ್ರತಿಯೊಬ್ಬರ ಸಹಕಾರ ಅಗತ್ಯ.
– ಬಾಬು ಬಿ.
ಕೆಯ್ಯೂರು ಗ್ರಾ.ಪಂ. ಅಧ್ಯಕ್ಷರು