Advertisement

ದೊರನಹಳ್ಳಿ ಸಿಲಿಂಡರ್‌ ಸ್ಪೋಟ ಪ್ರಕರಣ : ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ

07:17 PM Feb 28, 2022 | Team Udayavani |

ಯಾದಗಿರಿ : ದೋರನಹಳ್ಳಿಯಲ್ಲಿ ಶುಕ್ರವಾರ ಸೀಮಂತ ಕಾರ್ಯಕ್ರಮದ ವೇಳೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು ಸಚಿವ ಪ್ರಭು ಚವ್ಹಾಣ್ ಅವರು ಮೃತ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ಪ್ರತಿಯೊಬ್ಬರಿಗೂ 5 ಲಕ್ಣ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Advertisement

ಕಳೆದ ಶುಕ್ರವಾರ ದೋರನಹಳ್ಳಿಯಲ್ಲಿ ನಿವೃತ್ತ ನೌಕರ ಸಾಯಬಣ್ಣ ಹಗರಟಿಗಿ ಅವರ ಮನೆಯಲ್ಲಿ  ಸೀಮಂತ ಕಾರ್ಯಕ್ರಮ ನಡೆಯುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು, ಅವರೆಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಐದು ಮಂದಿ ಮೃತಪಟ್ಟಿದ್ದಾರೆ.

ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಪ್ರಭು ಚವ್ಹಾಣ್ ಅವರು ಮೃತ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 5 ಲಕ್ಷ ಪರಿಹಾರ ನೀಡುವುದಾಗಿ, ಅಲ್ಲದೆ ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಚಿಕಿತ್ಸಾ ವೆಚ್ಚ ತುಂಬಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಕಣ್ಣೆತ್ತಿ ನೋಡಿದವರ ಕಣ್ಣುಗಳನ್ನು ಕೀಳುವ ಕೆಲಸ ಮಾಡಬೇಕಾಗಿದೆ : ರೂಪಾಲಿ ನಾಯ್ಕ

Advertisement

Udayavani is now on Telegram. Click here to join our channel and stay updated with the latest news.

Next