Advertisement

ಸುಳ್ಯ ಗ್ಯಾಸ್ ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

09:59 AM Feb 11, 2020 | sudhir |

ಸುಳ್ಯ : ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ಕೃಷ್ಣ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ.

Advertisement

ಫೆ.10 ರಂದು ಸಂಜೆ 4 ಗಂಟೆ ವೇಳೆಗೆ ಮನೆಯಲ್ಲಿ ಹೊಗೆ ಕಾಣಿಸಿಕೊಂಡಿದ್ದು ಸ್ವಲ್ಪ ಹೊತ್ತಿನಲ್ಲಿ ಭಾರಿ ಸದ್ದು ಕೇಳಿಸಿತು. ಮನೆಯ ಒಳಗೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ.

ಸ್ಪೋಟದ ತೀವ್ರತೆಗೆ ಮನೆಯ ಎದುರಲ್ಲಿದ್ದ ತೆಂಗಿನ ಮರದ ತುದಿಯವರೆಗೆ ಬೆಂಕಿಯ ಚೆಂಡು ಹಾರಿ ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡಿತು.

ಮನೆಯಲ್ಲಿ ಕೃಷ್ಣ ಎಂಬವರ ಪತ್ನಿ ಮತ್ತು ಮಗಳು ಮಾತ್ರ ವಾಸವಿದ್ದರು. ಇಂದು ಬೆಳಿಗ್ಗೆ ಅವರಿಬ್ಬರು ಸುಳ್ಯಕ್ಕೆ ಹೋಗಿದ್ದು ಮನೆಯಲ್ಲಿ ಯಾರೂ ಇಲ್ಲವಾದ್ದರಿಂದ ಪ್ರಾಣಹಾನಿ ಸಂಭವಿಸಿಲ್ಲ.

Advertisement

Advertisement

Udayavani is now on Telegram. Click here to join our channel and stay updated with the latest news.

Next