ಶಿವಮೊಗ್ಗ: ಮನೆಯೊಂದರಲ್ಲಿ ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿಪುರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಶಿವಮೊಗ್ಗ ತಾಲೂಕಿನ ಶಾಂತಿಪುರದ ಶ್ರೀಧರ್ ಎಂಬುವರ ಮನೆಯಲ್ಲಿ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಇದನ್ನೂ ಓದಿ:ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ
ಗ್ಯಾಸ್ ಸೋರಿಕೆಯಿಂದ ಮನೆಯ ಹಲವು ವಸ್ತುಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಆದರೆ ಮನೆಯವರು ಹಾಗೂ ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
Related Articles
ಬೆಂಕಿ ಹೊತ್ತಿದಾಗ ಮರಳು, ಹಸಿ ಗೋಣಿ ಚೀಲ ಹಾಕಿರುವ ಸ್ಥಳೀಯರು, ಬೆಂಕಿ ಮತ್ತಷ್ಟು ವ್ಯಾಪಿಸದಂತೆ ಕ್ರಮವಹಿಸಿದ್ದರಿಂದ ಆಗಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ನಂತರ ಸ್ಥಳಕ್ಕೆ ಆಗಮಿಸಿದ ಆಗ್ನಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.