Advertisement
ಜಿಲ್ಲಾ ಉಸ್ತುವಾರಿ ಸಚಿವರಿಂದ ಬಂದಿರುವ ಪಟ್ಟಿಯಲ್ಲಿ ರುವವರು ಈಗಾಗಲೇ ಅನಿಲ ಸಂಪರ್ಕ ಪಡೆದಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುವುದು. ನಂತರ ಅರ್ಹರ ಪಟ್ಟಿಗೆ ಮುಖ್ಯಮಂತ್ರಿ ಒಪ್ಪಿಗೆ ಪಡೆದು ಸಂದೇಶ ರವಾನಿಸಲಾಗುವುದು. ಫಲಾನುಭವಿಗಳು ಪಂಚಾಯತ್ ಕಚೇರಿಗೆ ಹೋಗಿ ಅರ್ಜಿ ಭರ್ತಿ ಮಾಡಿ ಕೊಟ್ಟರೆ ತೈಲ ಕಂಪನಿಗಳಿಗೆ ಚೆಕ್ ಮೂಲಕ ಹಣ ಸಂದಾಯ ಮಾಡಲಾಗುವುದು. ಫಲಾನುಭವಿಗಳಿಗೆ ಸ್ಟೌ ಖರೀದಿ ಸಂಬಂಧ ಡಿಡಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.ರಾಜ್ಯದಲ್ಲಿ ಒಟ್ಟು 10 ಲಕ್ಷ ಫಲಾನುಭವಿಗಳಿಗೆ ಮುಖ್ಯಮಂತ್ರಿಯವರ ಅನಿಲ ಭಾಗ್ಯ ಯೋಜನೆ ತಲುಪಿಸಲು ಗುರಿ ಹೊಂದಲಾಗಿದೆ. ಪ್ರತಿ ವರ್ಷ 1.50 ರಿಂದ 2 ಲಕ್ಷ ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಕಾರ್ಯ ನಿರ್ವಹಣೆ ಪ್ರಶಸ್ತಿ ಪ್ರಕಟವಾಗಿದ್ದು, ಮಂಗಳವಾರ ದೆಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಲಾಖೆಯ ಕಾರ್ಯದರ್ಶಿ ಪ್ರಶಸ್ತಿ ಪಡೆದಿದ್ದಾರೆ. ಈ ಹಿಂದೆ ನಾನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವನಾಗಿದ್ದಾಗಲೂ ಕೇಂದ್ರ ಸರ್ಕಾರದ ಪ್ರಶಸ್ತಿ ದೊರೆತಿತ್ತು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ರಾಜ್ಯ ಸರ್ಕಾರದ ಕಾರ್ಯ ನಿರ್ವಹಣೆ ಮೆಚ್ಚಿ ಪ್ರಶಸ್ತಿ ನೀಡಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.