Advertisement

Gas geyser: ಗ್ಯಾಸ್‌ ಗೀಸರ್‌ ಸೋರಿಕೆಯಿಂದ ಯುವತಿ ಸಾವು

10:30 AM Dec 26, 2023 | Team Udayavani |

ಬೆಂಗಳೂರು: ಮನೆಯಲ್ಲಿ ಸ್ನಾನ ಮಾಡುವಾಗ ಯುವತಿಯೊಬ್ಬಳು ಕುಸಿದು ಬಿದ್ದು ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಹೌಸಿಂಗ್‌ ಬೋರ್ಡ್‌ ನಿವಾಸಿ ರಾಜೇಶ್ವರಿ(23) ಮೃತ ಯುವತಿ. ಡಿ.20ರಂದು ಮಧ್ಯಾಹ್ನ 2 ಗಂಟೆಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿ.ಕಾಂ ಪದವಿ ವ್ಯಾಸಂಗ ಮಾಡಿದ್ದ ರಾಜೇಶ್ವರಿ, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂಬಂಧಿಕರೊಬ್ಬರ ಮದುವೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಲಸಕ್ಕೆ ರಜೆ ಹಾಕಿದ್ದರು. ಡಿ.20ರಂದು ಮಧ್ಯಾಹ್ನ ಸ್ನಾನ ಮಾಡಲು ಬಾತ್‌ ರೂಮ್‌ಗೆ ಹೋಗಿದ್ದಾರೆ. 20 ನಿಮಿಷ ಕಳೆದರೂ ಬಾತ್‌ ರೂಮ್‌ನಿಂದ ರಾಜೇಶ್ವರಿ ಹೊರಗೆ ಬಂದಿಲ್ಲ. ಅನುಮಾನಗೊಂಡು ಕುಟುಂಬದ ಸದಸ್ಯರು ಬಾತ್‌ ರೂಮ್‌ ಬಾಗಿಲು ಬಡಿದಿದ್ದಾರೆ. ಆದರೂ ಪ್ರತಿಕ್ರಿಯೆ ಬಂದಿಲ್ಲ. ಬಳಿಕ ಬಾತ್‌ರೂಮ್‌ನ ಕಿಟಕಿ ಬಳಿ ತೆರಳಿ ನೋಡಿದಾಗ, ರಾಜೇಶ್ವರಿ ಅಸ್ವಸ್ಥರಾಗಿ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಬಾಗಿಲು ಒಡೆದು, ಒಳ ಹೋಗಿ, ಆಕೆಗೆ ಬಟ್ಟೆ ತೊಡಿಸಿ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ರಾಜೇಶ್ವರಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ವಿಷಯ ತಿಳಿದು ಪೊಲೀಸರು ಮೃತಳ ಮನೆಗೆ ತೆರಳಿ ಪರಿಶೀಲಿಸಿದ್ದಾರೆ.

ಗ್ಯಾಸ್‌ ಸೋರಿಕೆಯಿಂದ ಸಾವು?: ಕುಟುಂಬ ಸದಸ್ಯರು ಗ್ಯಾಸ್‌ ಗೀಸರ್‌ ಸೋರಿಕೆಯಿಂದ ರಾಜೇಶ್ವರಿ ಮೃತಪಟ್ಟಿದ್ದಾಳೆ ಎಂದು ಹೇಳುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next