ಚಂಡೀಗಢ: ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿ 9 ಮಂದಿ ಮೃತಪಟ್ಟು, ಹಲವರು ಆಸ್ಪತ್ರೆಗೆ ದಾಖಲಾಗಿರುವ ದುರಂತ ಘಟನೆ ಪಂಜಾಬ್‌ನ ಲೂಧಿಯಾನದಲ್ಲಿ ಭಾನುವಾರ (ಎ.30 ರಂದು) ನಡೆದಿರುವುದು ವರದಿಯಾಗಿದೆ.
ಲೂಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿರುವ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿದೆ. ಅನಿಲ ಸೋರಿಕೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.
ಅನಿಲ ಸೋರಿಕೆಯಿಂದಾಗಿ ಈ ದುರಂತ ನಡೆದಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಎನ್ ಡಿಆರ್ ಎಫ್, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ಅಗ್ನಿಶಾಮಕ ದಳ ತಂಡ ತಲುಪಿದ್ದು ಕಾರ್ಯಾಚರಣೆಗೆ ಇಳಿದಿದ್ದಾರೆ. ಒಟ್ಟು 9 ಮಂದಿ ಮೃತಪಟ್ಟಿದ್ದು, ಅಸ್ವಸ್ಥರಾದ 11 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎನ್‌ಡಿಆರ್‌ಎಫ್ ತಂಡವು ಹೆಚ್ಚಿನ ತನಿಖೆ ನಡೆಸುತ್ತದೆ ಎಂದು ಲುಧಿಯಾನದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಸ್ವಾತಿ ತಿವಾನಾ ಎಎನ್‌ಐಗೆ ತಿಳಿಸಿದ್ದಾರೆ.
“ಲುಧಿಯಾನದ ಗಿಯಾಸ್‌ಪುರ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯ ಘಟನೆ ಅತ್ಯಂತ ದುಃಖಕರವಾಗಿದೆ. ಪೊಲೀಸರು, ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿವೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿದ್ದಾರೆ.