Advertisement

ವಿಷಾನಿಲ ಸೋರಿಕೆ: ಮಗು ಸೇರಿದಂತೆ ಐವರು ಸಾವು: 200ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

08:27 AM May 08, 2020 | Mithun PG |

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಬಹುರಾಷ್ಟ್ರೀಯ ಸಂಸ್ಥೆಯ ರಾಸಾಯನಿಕ ಸ್ಥಾವರದಿಂದ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮವಾಗಿ  ಮಗು ಸೇರಿದಂತೆ ಐವರು ಸಾವನ್ನಪ್ಪಿ, ಸುಮಾರು 200 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್ ಡಿಟಿವಿ ವರದಿ ತಿಳಿಸಿದೆ.

Advertisement

ಸುಮಾರು 1 ಸಾವಿರಕ್ಕೂ ಅಧೀಕ ಮಂದಿ ಅಸ್ವಸ್ಥರಾಗಿದ್ದು ಸ್ಥಳಕ್ಕೆ ಪೊಲೀಸರು, ಆಂಬ್ಯುಲೆನ್ಸ್‌ಗಳು, ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇಂದು ಮುಂಜಾನೆ ಸುಮಾರು 3 ಗಂಟೆ ಗೆ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ  ಹರಡಿದೆ. ಪರಿಣಾಮವಾಗಿ ಹಲವು ಜನರಿಗೆ ಉಸಿರಾಟದ ಸಮಸ್ಯೆ ಎದುರಾಗಿದೆ. ಮಾತ್ರವಲ್ಲದೆ ಕಣ್ಣು ಸುಡುವ ಅನುಭವವೂ ಆಗಿದ. ಹಲವು ಮಂದಿ ವಿಷಾನಿಲವನ್ನು ಉಸಿರಾಡಿ ಕೂಡಲೇ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

“ಗೋಪಾಲಪಟ್ಟಣದ  ಸಮೀಪದಲ್ಲಿ ಅನಿಲ ಸೋರಿಕೆಯಾಗಿದ್ದು, ಮುನ್ನೆಚ್ಚರಿಕೆಗಳಿಗಾಗಿ ಈ ಸ್ಥಳಗಳಲ್ಲಿ ವಾಸವಿರುವವರು  ಮನೆಗಳಿಂದ ಹೊರಬರದಂತೆ ವಿನಂತಿಸುತ್ತಿಸುತ್ತೇವೆ ಎಂದು ವಿಶಾಖಪಟ್ಟಣಂ ಮಹಾನಗರ ಪಾಲಿಕೆ ಟ್ವೀಟ್ ಮಾಡಿದೆ.

ನೆಲದ ಮೇಲೆಯೇ ಹಲವಾರು ಜನರು  ಪ್ರಜ್ಞಾಹೀನರಾಗಿ ಬಿದ್ದಿದ್ದು ಪ್ರಕರಣ ಹೆಚ್ಚು ಗಂಭೀರದಿಂದ ಕೂಡಿದ್ದು ಸಾವುನೋವುಗಳು ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ವರದಿ ತಿಳಿಸಿದೆ. .ಕಾರ್ಖಾನೆಯಿಂದ ವಿಷಾನಿಲ ಸೋರಿಕೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Advertisement

1961ರಲ್ಲಿ ಹಿಂದೂಸ್ತಾನ್ ಪಾಲಿಮರ್ಸ್ ಎಂದು ಸ್ಥಾಪಿಸಲ್ಪಟ್ಟ ಈ ಕಂಪನಿಯನ್ನು, ನಂತರದಲ್ಲಿ  ದಕ್ಷಿಣ ಕೊರಿಯಾದ ಎಲ್ ಜಿ  ಕೆಮ್ ಎಂಬ ಸಂಸ್ಥೆ ನಡೆಸಿಕೊಂಡು ಬರುತ್ತಿದ್ದು 1997 ರಲ್ಲಿ ಎಲ್ ಜಿ  ಪಾಲಿಮರ್ಸ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು. ಇಲ್ಲಿ ಆಟಿಕೆಗಳು ಮತ್ತು ವಿವಿಧ ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ತಯಾರಿಸಲಾಗುತ್ತಿತ್ತು,

Advertisement

Udayavani is now on Telegram. Click here to join our channel and stay updated with the latest news.

Next