ಆಂಧ್ರಪ್ರದೇಶ : ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ 50ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಬ್ರಾಂಡಿಕ್ಸ್‍ನಲ್ಲಿ ನಡೆದಿದೆ.
ಗ್ಯಾಸ್ ಸೋರಿಕೆಯಾದ ಬೆನ್ನಲ್ಲೇ ಕಾರ್ಮಿಕರು ಅಸ್ವಸ್ಥರಾಗಿದ್ದು ಕೂಡಲೇ ಸ್ಥಳೀಯ ಅರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು.
ಘಟನೆ ಕುರಿತು ಮಾಹಿತಿ ನೀಡಿದ ಅಣಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೈಗಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾಗಿ ಸುಮಾರು 50ಕ್ಕೂ ಅಧಿಕ ಮಹಿಳೆಯರು ಅಸ್ವಸ್ಥರಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅಲ್ಲದೆ ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದಾರೆ ಎಂದು ಹೇಳಿದ್ದಾರೆ.
ಈ ಹಿಂದೆಯೂ ಈ ಜಿಲ್ಲೆಯಲ್ಲಿ ಅನಿಲ ಸೋರಿಕೆ ಪ್ರಕರಣ ನಡೆದಿದ್ದು ಅದರಲ್ಲಿ ಇನ್ನೂರು ಮಹಿಳಾ ಕಾರ್ಮಿಕರು ಅಸ್ವಸ್ಥಗೊಂಡಿದ್ದರು. ಇಂದಿನ ಘಟನೆಗೂ ಅಮೋನಿಯಾ ಅನಿಲ ಸೋರಿಕೆಯಾಗಿರುವುದೇ ಕಾರಣ ಎಂದು ಅಂದಾಜಿಸಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.
ಇದನ್ನೂ ಓದಿ : ಸುಬ್ರಹ್ಮಣ್ಯ ಗುಡ್ಡ ಕುಸಿದು ದುರಂತ ಪ್ರಕರಣ : ಇಬ್ಬರು ಮಕ್ಕಳಿಗೆ ಕಣ್ಣೀರ ವಿದಾಯ