ಬೆಳ್ತಂಗಡಿ: ಇಲ್ಲಿನ ಚಾರ್ಮಾಡಿ ಘಾಟ್‌ಗೆ ಹೊಂದಿಕೊಂಡಂತಿರುವ ಪಣಕ್ಕಜೆ ಎಂಬಲ್ಲಿ ಗ್ಯಾಸ್ ಟ್ಯಾಂಕರ್‌ನಿಂದ ಇದ್ದಕ್ಕಿದ್ದಂತೆ ಗ್ಯಾಸ್ ಲೀಕ್ ಆದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದ್ದು, ಮುಂಜಾಗೃತಾ ಕ್ರಮವಾಗಿ ಕೆಲ ಕಾಲ ಸಂಚಾರವನ್ನು ತಡೆ ಹಿಡಿಯಲಾಗಿತ್ತು.
ಶಿರಾಡಿ ಘಾಟ್ ದುರಸ್ತಿಯ ಹಿನ್ನಲೆಯಲ್ಲಿ ಹೆಚ್ಚಿನ ವಾಹನಗಳು ಚಾರ್ಮಾಡಿ ಮೂಲಕವೇ ಮಂಗಳೂರು ಬೆಂಗಳೂರಿಗೆ ಸಂಚರಿಸುತ್ತಿದ್ದವು.
ಟ್ಯಾಂಕರ್‌ನ ಮೇಲ್ಭಾಗದಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ಅಗ್ನಿ ಶಾಮಕದಳದ ಅಧಿಕಾರಿಗಳು ದೌಡಾಯಿಸಿ ನೀರು ಹಾರಿಸಿ ಅಗ್ನಿ ಅವಘಡವಾಗದಂತೆ ತಡೆದಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರಕ್ಕೆ ಸಂಪೂರ್ಣ ತಡೆ ಒಡ್ಡಿದ್ದಾರೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಪಣಕಜೆ ಗ್ರಾಮದಲ್ಲಿ ವಿದ್ಯುತ್ ಸಂಪರ್ಕವನ್ನೂ ಕಡಿತಗೊಳಿಸಲಾಗಿತ್ತು.