ನೆಲ್ಯಾಡಿ: ಇಲ್ಲಿನ ಎಂಜಿರ ಬಳಿ ಶುಕ್ರವಾರ ಬೆಳಿಗ್ಗೆ ಹೆದ್ದಾರಿಗೆ ಅಡ್ಡಲಾಗಿ ಉರುಳಿಬಿದ್ದಿದ್ದ ಬುಲೆಟ್ ಗ್ಯಾಸ್ ಟ್ಯಾಂಕರ್ ಅನ್ನು ಇದೀಗ ತೆರವುಗೊಳಿಸಲಾಗಿದೆ. ಗ್ಯಾಸ್ ತುಂಬಿದ್ದ ಟ್ಯಾಂಕರ್ ರಸ್ತೆಗೆ ಬಿದ್ದಿದ್ದರಿಂದ ಈ ಭಾಗದಲ್ಲಿನ ವಾಹನಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.
ಅದಲ್ಲಿದೆ ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆಯ ಸಂಶಯವೂ ಕಂಡುಬಂದಿದ್ದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಮನೆಗಳಲ್ಲಿ ಗ್ಯಾಸ್ ಮತ್ತು ಬೆಂಕಿ ಉರಿಸದಂತೆ ಸೂಚನೆ ನೀಡಲಾಗಿತ್ತು.
ನೆಲ್ಯಾಡಿ ಹೊರಠಾಣೆಯ ಪೊಲೀಸರು ಬದಲೀ ಸಂಚಾರ ವ್ಯವಸ್ಥೆಯನ್ನು ಮಾಡಿದರು. ಪುತ್ತೂರಿನಿಂದ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಟ್ಯಾಂಕರ್ ತೆರವು ಕಾರ್ಯಾಚರಣೆಯ ಉಸ್ತುವಾರಿಯನ್ನು ನಡೆಸಿದರು.
ಇದೀಗ ಹೆದ್ದಾರಿ ಮೂಲಕ ವಾಹನಗಳ ಸಂಚಾರ ಪುನರಾರಂಭಗೊಂಡಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಮಂಗಳೂರು ಸೇರಿದಂತೆ ಕರಾವಳಿ ಭಾಗಗಳನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಇದಾಗಿದೆ.
►►ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ : ಅನಿಲ ಸೋರಿಕೆ ಭೀತಿ: //bit.ly/2YCinRU