Advertisement

ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ… ಗ್ಯಾಸ್ ಸೋರಿಕೆ, ಅಗ್ನಿಶಾಮಕ ಸಿಬ್ಬಂದಿ ದೌಡು

11:47 AM Mar 13, 2024 | Team Udayavani |

ಸಕಲೇಶಪುರ: ಶಿರಾಡಿಘಾಟ್ ರಸ್ತೆ ಎನ್‌ಎಚ್‌-75 ರಲ್ಲಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಟ್ಯಾಂಕ‌ರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

Advertisement

ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ..

ಮಾರ್ಗಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ನೂರಾರು ವಾಹನಗಳು ನಿಂತಲ್ಲೆ ನಿಂತಿವೆ.

ಬೆಂಗಳೂರು-ಹಾಸನ-ಮಂಗಳೂರು:
ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ಹೋಗಿದ್ದು ಮಂಗಳೂರಿನ ಎಮ್. ಆರ್. ಪಿ. ಎಲ್ ನಿಂದ ತಜ್ಞರ ತಂಡ ಆಗಮಿಸಬೇಕಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ.ಪಲ್ಟಿಯಾದ ಗ್ಯಾಸ್ ಟ್ಯಾಂಕರ್‌ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ.ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಪ್ರಕರಣ: ಮತ್ತೊಮ್ಮೆ ಬಳ್ಳಾರಿ ನಗರಕ್ಕೆ ಬಂದ NIA ಅಧಿಕಾರಿಗಳು

Advertisement

Udayavani is now on Telegram. Click here to join our channel and stay updated with the latest news.

Next