- ತಂಪು ಪಾನೀಯ ಮತು ಕೆಫೀನ್‌ಯುಕ್ತ ಪಾನೀಯಗಳನ್ನು ಸೇವಿಸಬೇಡಿ.
- ಪ್ರತಿದಿನ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಪ್ರತಿದಿನ 10-12 ಗ್ಲಾಸ್‌ನಷ್ಟು ನೀರನ್ನು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದರಿಂದ ವಾಯು ಮತ್ತು ಆಸಿಡಿಟಿಯಂತಹ ರೋಗ ಲಕ್ಷಣಗಳು ನಿಯಂತ್ರಣಕ್ಕೆ ಬರುತ್ತವೆ.
- ನೀವು ಅಸಿಡಿಟಿಯಿಂದ ಬಳಲುತ್ತಿದ್ದರೆ ಎಳನೀರು ಕುಡಿಯಿರಿ ಅದು ಅಸಿಡಿಟಿಯನ್ನು ಶಮನಗೊಳಿಸಿ, ಜೀರ್ಣಾಂಗವ್ಯೂಹವನ್ನು ಶಾಂತಗೊಳಿಸುತ್ತದೆ.
- ರಾತ್ರಿಯ ಊಟವನ್ನು ನೀವು ನಿದ್ದೆ ಹೋಗುವುದಕ್ಕೆ 2 ರಿಂದ 3 ಗಂಟೆ ಮೊದಲು ಮುಗಿಸಿಬಿಡಿ.
- ಎರಡು ಊಟಗಳ ನಡುವೆ ದೀರ್ಘ ಅಂತರವಿರುವುದು ಅಸಿಡಿಟಿ ಕಾಣಿಸಿಕೊಳ್ಳಲು ಇರುವ ಮತ್ತೊಂದು ಕಾರಣ. ಮಧ್ಯೆ ಮಧ್ಯೆ ಸಣ್ಣ ಸಣ್ಣ ಪ್ರಮಾಣದಲ್ಲಿ ನಿಯುತವಾಗಿ ಊಟ ಸೇವಿಸಿ.
- ಉಪ್ಪಿನಕಾಯಿ, ಮಸಾಲೆ ಚಟ್ನಿ, ವಿನೇಗರ್ ಇತ್ಯಾದಿಗಳನ್ನು ಸೇವಿಸಬೇಡಿ
- ಯೋಗ ಅಥವಾ ಇತರ ಒತ್ತಡ- ನಿವಾರಕ ಚಟುವಟಿಕೆಗಳು ಅಸಿಡಿಟಿಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲು ಬಹಳ ಸಹಕಾರಿ ಆಗಬಹುದು.
- ಕರಿದ ಪದಾರ್ಥ, ಕೊಬ್ಬುಯುಕ್ತ ಆಹಾರ, ಹಾಳುಮೂಳು ಆಹಾರ ಮತ್ತು ಚಾಕೊಲೇಟ್‌ಗಳನ್ನು ಸೇವಿಸಬಾರದು.
- ಕಾರ್ಬೋಹೈಡ್ರೇಟ್ ಸಮೃದ್ಧವಾಗಿರುವ ಆಹಾರವನ್ನು ಹೆಚ್ಚು ಸೇವಿಸಿ – ಉದಾ: ಅನ್ನ – ಇಂತಹ ಆಹಾರಗಳಲ್ಲಿ ಆಮ್ಲವು ಬಹಳ ಕಡಿಮೆ ಪ್ರಮಾಣದಲ್ಲಿ ಉತ್ಪತ್ತಿ ಆಗುತ್ತದೆ.
- ಮನೆಯಲ್ಲೆ ತಯಾರಿಸಿದ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸಿ ಮತ್ತು ಹೊರಗಡೆ ಆಹಾರ ಸೇವಿಸುವುದನ್ನು ತಪ್ಪಿಸಿಕೊಳ್ಳಿ.
- ಸಿಗರೇಟು, ಆಲ್ಕೋಹಾಲ್ ಮತ್ತು ಗ್ಯಾಸ್ ತುಂಬಿಸಿರುವ ಪಾನೀಯಗಳನ್ನು ದೂರ ಇಡಿ.
Advertisement