Advertisement
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಡೆದ ಹಿಂದುಳಿದ ವರ್ಗಗಳ ಆಯೋಗದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ, ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ ಮಾತನಾಡಿ, ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸುವಂತೆ ಕೋರಿ ಅನೇಕ ಹಿಂದುಳಿದ ಜಾತಿಗಳು ಆಯೋಗಕ್ಕೆ ಮನವಿ ಸಲ್ಲಿಸಿವೆ ಎಂದು ಹೇಳಿದರು.
Related Articles
Advertisement
ಡೀಸಿ ಮೂಲಕ ವರದಿ ಸಲ್ಲಿಸಿ:ಜಾತಿ ಪಟ್ಟಿಯಲ್ಲಿ ಇಲ್ಲದ ಹಿಂದುಳಿದ ವರ್ಗದವರನ್ನು ಸೇರ್ಪಡೆಗೆ ಅರ್ಜಿ ಸಲ್ಲಿಸಲು ನಾಗರಿಕರಲ್ಲಿ ಮನವಿ ಮಾಡಿದರು. ತಾವು ಕರ್ತವ್ಯ ನಿರ್ವಹಿಸುವ ವ್ಯಾಪ್ತಿಯಲ್ಲಿ ಪಟ್ಟಿಗೆ ಸೇರ್ಪಡೆ ಆಗದ ವರ್ಗಗಳು ಗಮನಕ್ಕೆ ಕಂಡುಬಂದಿದ್ದರೆ ಕೂಡಲೇ ಆಯೋಗಕ್ಕೆ ಡೀಸಿ ಮೂಲಕ ವರದಿ ಸಲ್ಲಿಸಲು ಕ್ರಮವಹಿಸುವಂತೆ ತಹಶೀಲ್ದಾರ್‌ಗೆ ಸೂಚನೆ ನೀಡಿದರು. ಜಿಲ್ಲಾಡಳಿತದ ಕ್ರಮಕ್ಕೆ ಮೆಚ್ಚುಗೆ:
ಸುದ್ದಿಗೋಷ್ಠಿಗೂ ಮುನ್ನ ಆಯೋಗದ ಅಧ್ಯಕ್ಷರು ಜಿಲ್ಲಾ ಹಿಂದುಳಿದ ವರ್ಗಗಳ ಅಧಿ ಕಾರಿ ಡಾ.ಅಶೋಕ್ ಅವರಿಂದ ಮಾಹಿತಿ ಪಡೆದು, ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿ ಕಾರಿಗಳು ಸಮನ್ವಯತೆ ಸಾ ಧಿಸಿಕೊಂಡು ಒಂದು ತಂಡದ ರೀತಿಯಲ್ಲಿ ಪರಿಣಾಮಕಾರಿ ಆಗಿ ಕೆಲಸ ನಿರ್ವಹಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳನ್ನು ಯಶಸ್ವಿ ಆಗಿ ಶೇ.100 ಅನುಷ್ಠಾನ ಗೊಳಿಸಿರುವುದು ಗಮನಾರ್ಹ ಎಂದು ವಿವರಿಸಿದರು. ಅಲ್ಲದೆ, ಅಧಿಕಾರಿಗಳು ನೀಡಿರುವ ಎಲ್ಲಾ ಮಾಹಿತಿಯನ್ನು ಬುಧವಾರ ಜಿಲ್ಲಾದ್ಯಂತ ಖುದ್ದು ಆಯೋಗದ ಸದಸ್ಯರೊಂದಿಗೆ ಕ್ಷೇತ್ರ ವೀಕ್ಷಣೆ ಮಾಡಿ, ಪರಿಶೀಲನೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಸಭೆಯಲ್ಲಿ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಕಲ್ಯಾಣ್‌ಕುಮಾರ್, ರಾಜಶೇಖರ್, ಕೆ.ಟಿ.ಸುವರ್ಣ ಮತ್ತು ಅರುಣ್‌ಕುಮಾರ್, ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಪಿ.ಶಿವಶಂಕರ್, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ವಿವಿಧ ಇಲಾಖೆಗಳ ಅಧಿ ಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.