Advertisement

ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಸರ್ಕಾರಕ್ಕೆ ಶಿಫಾರಸು: ಕೆ.ಜಯಪ್ರಕಾಶ್‌ ಹೆಗ್ಡೆ

07:53 PM Sep 28, 2021 | Team Udayavani |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ತೀರಾ ಹಿಂದುಳಿದ ಹಲವು ಜಾತಿಗಳು ಹಿಂದುಳಿದ ವರ್ಗಗಳ ಸ್ಥಾನಮಾನ ಕೋರಿ ಮನವಿ ಸಲ್ಲಿಸಿದ್ದು, ಅದರಲ್ಲಿ 10 ಅನ್ನು ಬಹಿರಂಗವಾಗಿ ವಿಚಾರಣೆ ನಡೆಸಿ, ಆಕ್ಷೇಪಣೆ, ಸಲಹೆ, ಅಭಿಪ್ರಾಯ ಸಂಗ್ರಹಿಸಿ ಅಂತಿಮವಾಗಿ ಸೇರ್ಪಡೆ ಮಾಡಲು ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ತಿಳಿಸಿದ್ದಾರೆ.

Advertisement

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಡೆದ ಹಿಂದುಳಿದ ವರ್ಗಗಳ ಆಯೋಗದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ, ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ ಮಾತನಾಡಿ, ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸುವಂತೆ ಕೋರಿ ಅನೇಕ ಹಿಂದುಳಿದ ಜಾತಿಗಳು ಆಯೋಗಕ್ಕೆ ಮನವಿ ಸಲ್ಲಿಸಿವೆ ಎಂದು ಹೇಳಿದರು.

ಈ ರೀತಿಯ ಮನವಿಗಳನ್ನು ಸಾರ್ವಜನಿಕವಾಗಿ ವಿಚಾರಣೆಗೆ ಒಳಪಡಿಸಿ, ಆಕ್ಷೇಪಣೆ, ಸಲಹೆ, ಅಭಿಪ್ರಾಯ ಸ್ವೀಕರಿಸಿ ಅದರ ಆಧಾರದ ಮೇಲೆ ಅಂತಿಮವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರ ಆಯೋಗಕ್ಕೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮನವಿ ಸಲ್ಲಿಸಿದ್ದ ಅನೇಕ ಜಾತಿಗಳ ಪೈಕಿ 10 ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆಗೊಳಿಸುವ ಬಗ್ಗೆ ಆಯೋಗ ಶಿಫಾರಸು ಮಾಡಲಿದೆ. ಶೀಘ್ರ ಈ ಬಗ್ಗೆ ಸರ್ಕಾರಕ್ಕೆ ಪತ್ರವನ್ನು ಆಯೋಗ ಕಳುಹಿಸಿಕೊಡಲಿದೆ ಎಂದು ಹೇಳಿದರು.

ಇನ್ನೂ 15 ಜಾತಿ ಸೇರ್ಪಡೆಗೊಳಿಸುವ ಕ್ರಮವು ವಿಚಾರಣಾ ಹಂತದಲ್ಲಿದ್ದು, ಅ.11, 12 ರಂದು ಆಯೋಗ ಸಾರ್ವಜನಿಕವಾಗಿ ಸಭೆ ನಡೆಸಿ ಆಕ್ಷೇಪಣೆ, ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆಯುವುದು. ಒಟ್ಟಾರೆ ಆಗಿ ರಾಜ್ಯದ ಹಿಂದುಳಿದ ಜಾತಿ, ವರ್ಗಗಳ ಅಭಿವೃದ್ಧಿ ಮತ್ತು ಹಿತಾಸಕ್ತಿಗೆ ಪೂರಕವಾಗಿ ಆಯೋಗ ತನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮತ್ತು ಪಾರದರ್ಶಕವಾಗಿ ಮಾಡಲಿದೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ:ಮಂಗಳೂರು: ಕೋವಿಡ್ ನಿಯಮವನ್ನು ಪಾಲಿಸದೆ ಇದ್ದಲ್ಲಿ, ಕಾನೂನು ಕ್ರಮ ಖಚಿತ: ಮ.ನ.ಪಾ ಆಯುಕ್ತರು

Advertisement

ಡೀಸಿ ಮೂಲಕ ವರದಿ ಸಲ್ಲಿಸಿ:
ಜಾತಿ ಪಟ್ಟಿಯಲ್ಲಿ ಇಲ್ಲದ ಹಿಂದುಳಿದ ವರ್ಗದವರನ್ನು ಸೇರ್ಪಡೆಗೆ ಅರ್ಜಿ ಸಲ್ಲಿಸಲು ನಾಗರಿಕರಲ್ಲಿ ಮನವಿ ಮಾಡಿದರು. ತಾವು ಕರ್ತವ್ಯ ನಿರ್ವಹಿಸುವ ವ್ಯಾಪ್ತಿಯಲ್ಲಿ ಪಟ್ಟಿಗೆ ಸೇರ್ಪಡೆ ಆಗದ ವರ್ಗಗಳು ಗಮನಕ್ಕೆ ಕಂಡುಬಂದಿದ್ದರೆ ಕೂಡಲೇ ಆಯೋಗಕ್ಕೆ ಡೀಸಿ ಮೂಲಕ ವರದಿ ಸಲ್ಲಿಸಲು ಕ್ರಮವಹಿಸುವಂತೆ ತಹಶೀಲ್ದಾರ್‌ಗೆ ಸೂಚನೆ ನೀಡಿದರು.

ಜಿಲ್ಲಾಡಳಿತದ ಕ್ರಮಕ್ಕೆ ಮೆಚ್ಚುಗೆ:
ಸುದ್ದಿಗೋಷ್ಠಿಗೂ ಮುನ್ನ ಆಯೋಗದ ಅಧ್ಯಕ್ಷರು ಜಿಲ್ಲಾ ಹಿಂದುಳಿದ ವರ್ಗಗಳ ಅಧಿ ಕಾರಿ ಡಾ.ಅಶೋಕ್‌ ಅವರಿಂದ ಮಾಹಿತಿ ಪಡೆದು, ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿ ಕಾರಿಗಳು ಸಮನ್ವಯತೆ ಸಾ ಧಿಸಿಕೊಂಡು ಒಂದು ತಂಡದ ರೀತಿಯಲ್ಲಿ ಪರಿಣಾಮಕಾರಿ ಆಗಿ ಕೆಲಸ ನಿರ್ವಹಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳನ್ನು ಯಶಸ್ವಿ ಆಗಿ ಶೇ.100 ಅನುಷ್ಠಾನ ಗೊಳಿಸಿರುವುದು ಗಮನಾರ್ಹ ಎಂದು ವಿವರಿಸಿದರು.

ಅಲ್ಲದೆ, ಅಧಿಕಾರಿಗಳು ನೀಡಿರುವ ಎಲ್ಲಾ ಮಾಹಿತಿಯನ್ನು ಬುಧವಾರ ಜಿಲ್ಲಾದ್ಯಂತ ಖುದ್ದು ಆಯೋಗದ ಸದಸ್ಯರೊಂದಿಗೆ ಕ್ಷೇತ್ರ ವೀಕ್ಷಣೆ ಮಾಡಿ, ಪರಿಶೀಲನೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಕಲ್ಯಾಣ್‌ಕುಮಾರ್‌, ರಾಜಶೇಖರ್‌, ಕೆ.ಟಿ.ಸುವರ್ಣ ಮತ್ತು ಅರುಣ್‌ಕುಮಾರ್‌, ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಇಒ ಪಿ.ಶಿವಶಂಕರ್‌, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌, ವಿವಿಧ ಇಲಾಖೆಗಳ ಅಧಿ ಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next