ಚಿಕ್ಕಮಗಳೂರು: ಕಳೆದ ಕೆಲ ತಿಂಗಳುಗಳಿಂದ ಜಿಲ್ಲೆಯಾದ್ಯಂತ ಕಾಡಾನೆ ಹಾವಳಿ ಜೋರಾಗಿದ್ದು ಇದರಿಂದ ತೋಟದ ಕಾರ್ಮಿಕರು ಕೆಲಸಕ್ಕೆ ಹೋಗಲು ಭಯಪಡುತ್ತಿರುವ ಬೆನ್ನಲ್ಲೇ ಇದೀಗ ಕಾಡುಕೋಣಗಳ ಹಿಂಡೊಂದು ಚಿಕ್ಕಮಗಳೂರು ತಾಲೂಕಿನ ಬೆಟ್ಟದ ಮರಡಿ ಗ್ರಾಮದಲ್ಲಿ ಕಂಡುಬಂದಿದೆ.
ಸುಮಾರು ಹದಿನೈದಕ್ಕೂ ಹೆಚ್ಚು ಕಾಡುಕೋಣಗಳು ಕಂಡುಬಂದಿದ್ದು ಗ್ರಾಮಸ್ಥರು ಜೀವ ಭಯದಲ್ಲಿ ಕೆಲಸಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿಂದೆ ಕಾಡಾನೆ ದಾಳಿಯಿಂದ ಕಂಗೆಟ್ಟ ಜನರು ಮನೆಯಿಂದ ಹೊರಬರಲು ಹೆದರುವ ಸ್ಥಿತಿ ನಿರ್ಮಾಣವಾಗಿತ್ತು ಇದರ ಜೊತೆಗೆ ಕಾಡುಕೋಣಗಳು ನಾಡಿನತ್ತ ಹೆಜ್ಜೆ ಹಾಕಲಾರಂಭಿಸಿದೆ.
ತೋಟದ ಕೆಲಸ ಹಾಗೂ ಇತರ ಕೆಲಸಗಳಿಗೂ ಹೋಗಲು ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ ಈ ನಡುವೆ ಗ್ರಾಮಸ್ಥರು ಸೇರಿ ಕಾಡುಕೋಣಗಳನ್ನು ಕಡಿಗಟ್ಟುವ ಪ್ರಯತ್ನವನ್ನೂ ಮಾಡಿದ್ದಾರೆ. ಅರಣ್ಯ ಇಲಾಖೆಗೆ ಈ ಕುರಿತು ಮಾಹಿತಿ ನೀಡಿದರು ಯಾವುದೇ ಪ್ರಯೋಜನವಿಲ್ಲ ಎಂದಿದ್ದಾರೆ.
ಕಾಡು ಪ್ರಾಣಿಗಳ ಹಾವಳಿಗೆ ಬೇಸತ್ತು ಹೋಗುತ್ತಿರುವ ಮಲೆನಾಡು ಭಾಗದ ಜನರು ಕಾಡು ಕೋಣಗಳ ಹಿಂಡನ್ನು ಕಂಡು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ಇದನ್ನೂಓದಿ: Delhi: ಪೈಂಟ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅನಾಹುತ: 11 ಮಂದಿ ಮೃತ್ಯು ಇಬ್ಬರು ನಾಪತ್ತೆ